ಮುಂಗಾರು ಹಂಗಾಮಿನಲ್ಲಿ ರೈತರು ತಾವು ಬೆಳೆದ ಕೃಷಿ ಉತ್ಪನ್ನಗಳನ್ನು ಒಕ್ಕಣೆ ಮತ್ತು ಸಂಸ್ಕರಣೆ ಮಾಡಿಕೊಳ್ಳಲು 8*6 ಮೀ. ಅಳತೆಯ ಟಾರ್ಪಲಿನ್‍ಗಳನ್ನು ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಫಲಾನುಭವಿಗಳನ್ನು ಜನಪ್ರತಿನಿಧಿಗಳ ಹಾಗೂ ಕೃಷಿಕ ಸಮಾಜದ ನಿರ್ದೇಶಕರ ಸಮ್ಮುಖದಲ್ಲಿ ಲಾಟರಿ ಮುಖಾಂತರ ಆಯ್ಕೆ ಮಾಡಲಾಗುವುದು ಆದ್ದರಿಂದ ರೈತರು ಆಯಾ ಹೋಬಳಿಗಳ ರೈತ ಸಂಪರ್ಕ ಕೇಂದ್ರಗಳಲ್ಲಿ ನವೆಂಬರ್ 15 ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸಿ ಈ ಯೋಜನೆಯನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ತಾಲ್ಲೂಕು ಕೃಷಿ ಸಹಾಯಕ ನಿರ್ದೇಶಕ ಡಾ.ಎಸ್.ವಿ ಮಂಜುನಾಥ್ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಪಹಣಿ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ (ಪ.ಜಾತಿ, ಪ.ಪಂ), ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್ ಲಗತ್ತಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.