ಕೋವಿಡ್ ನಿಂದ ತಂದೆ-ತಾಯಿಯರನ್ನು ಕಳೆದುಕೊಂಡು ಅನಾಥರಾದ ಹಾಗೂ ತಂದೆ-ತಾಯಿ ಇಬ್ಬರು ಕೊರೊನಾ ಸೊಂಕಿನಿಂದ ಆಸ್ವತ್ರೆಗೆ ಸೇರಿ ದಿಕ್ಕು ತೋಚದಂತಾದ ಮಕ್ಕಳಿಗೆ ತಾತ್ಕಾಲಿಕ ಆಶ್ರಯ ನೀಡಿ ಅಗತ್ಯ ನೆರವು ಕಲ್ಪಿಸಲು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮುಂದಾಗಿದೆ.
ಜಿಲ್ಲೆಯಲ್ಲಿ ಕೋವಿಡ್-19ಗೆ ಒಳಪಟ್ಟ ಪೋಷಕರ 18 ವರ್ಷದೊಳಗಿನ ಮಕ್ಕಳು ಸಂಕಷ್ಟದಲ್ಲಿದ್ದರೆ ಆ ಮಕ್ಕಳ ಪಾಲನೆ, ಪೋಷಣೆ, ರಕ್ಷಣೆಗಾಗಿ ಮತ್ತು ಪುನರ್ವಸತಿಗಾಗಿ ಮಕ್ಕಳ ಸಹಾಯವಾಣಿ 1098 ಅಥವಾ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಚೇರಿಯ ದೂರವಾಣಿ 08156-277113 ಹಾಗೂ ಟೆಲಿ-ಕೌನ್ಸೆಲಿಂಗ್-14499ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.