ನಗರದ ಒಬ್ಬ ವ್ಯಕ್ತಿ ಸೇರಿದಂತೆ ತಾಲ್ಲೂಕಿನಲ್ಲಿ ಬುಧವಾರ ಮೂವರಿಗೆ ಕೊರೊನಾ ಸೋಂಕು ತಗುಲಿದೆ.
ನಗರದ ಆಜಾದ್ ನಗರದ 32 ವರ್ಷ ವಯಸ್ಸಿನ ವ್ಯಕ್ತಿ ಹಾಗೂ ತಾಲ್ಲೂಕಿನ ಆನೂರಿನ 7 ವರ್ಷದ ಬಾಲಕ ಮತ್ತು ದೇವಗಾನಹಳ್ಳಿಯ 35 ವರ್ಷದ ವ್ಯಕ್ತಿಗೆ ಕೊರೊನಾ ಸೋಕು ತಗುಲಿರುವುದು ತಿಳಿಯುತ್ತಿದ್ದಂತೆಯೇ ಆರೋಗ್ಯ ಸಿಬ್ಬಂದಿ ಅವರನ್ನು ಕೋವಿಡ್ ಆಸ್ಪತ್ರೆಗೆ ಆಂಬುಲೆನ್ಸ್ ನಲ್ಲಿ ಕಳುಹಿಸಿದ್ದಾರೆ. ಸೋಂಕಿತರು ವಾಸಿಸುತ್ತಿದ್ದ ಪ್ರದೇಶವನ್ನು ಸೀಲ್ ಡೌನ್ ಮಾಡಿ, ಸೂಕ್ಷ್ಮಾಣು ನಾಶಕವನ್ನು ಸಿಂಪಡಣೆ ಮಾಡಿಸಿದ್ದಾರೆ.