Home News ಮಕ್ಕಳಲ್ಲಿರುವ ಅಪಾರ ಶಕ್ತಿಯನ್ನು ಹೊರತರುವಂತಹ ಪ್ರಾಮಾಣಿಕವಾದ ಪ್ರಯತ್ನವನ್ನು ಶಿಕ್ಷಕರು ಮಾಡಬೇಕು

ಮಕ್ಕಳಲ್ಲಿರುವ ಅಪಾರ ಶಕ್ತಿಯನ್ನು ಹೊರತರುವಂತಹ ಪ್ರಾಮಾಣಿಕವಾದ ಪ್ರಯತ್ನವನ್ನು ಶಿಕ್ಷಕರು ಮಾಡಬೇಕು

0

ಮಕ್ಕಳಲ್ಲಿ ಅಪಾರವಾದ ಶಕ್ತಿಯಿದ್ದು, ಅದನ್ನು ಹೊರತರುವಂತಹ ಪ್ರಾಮಾಣಿಕವಾದ ಪ್ರಯತ್ನವನ್ನು ಶಿಕ್ಷಕರು ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಹೇಳಿದರು.
ತಾಲ್ಲೂಕಿನ ಮಳ್ಳೂರು ಗ್ರಾಮದ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಆಯೋಜನೆ ಮಾಡಿದ್ದ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.

ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರು ಗ್ರಾಮದ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಸಫಮವಾರ ಆಯೋಜನೆ ಮಾಡಿದ್ದ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರು ಗ್ರಾಮದ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಸಫಮವಾರ ಆಯೋಜನೆ ಮಾಡಿದ್ದ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ವಿದ್ಯಾರ್ಥಿಯ ಜೀವನದಿಂದಲೇ ನಿರ್ದಿಷ್ಟವಾದ ಗುರಿಯನ್ನು ಹೊಂದಿರಬೇಕು, ಆಗ ಮಾತ್ರ ಜೀವನದಲ್ಲಿ ಸಾಧನೆಯನ್ನು ಮಾಡಲು ಸಾಧ್ಯವಾಗುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿನ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವುದರ ಜೊತೆಗೆ ಅವರಲ್ಲಿರುವ ಕೌಶಲ್ಯಗಳನ್ನು ಹೊರತಂದು ಅವರನ್ನು ಸಮಾಜದ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡಬೇಕು ಎಂದರು.
ರೇಷ್ಮೆ ಕೃಷಿ ಅಭಿವೃದ್ದಿ ಆಯುಕ್ತ ಜಿ.ಸತೀಶ್ ಮಾತನಾಡಿ,‘ಮಕ್ಕಳಲ್ಲಿರುವ ಪ್ರತಿಭೆಗಳನ್ನು ಹೊರಪಡಿಸಬೇಕಾದರೆ, ಪೂರಕವಾಗಿರುವ ವಾತಾವರಣವನ್ನು ನಿರ್ಮಾಣ ಮಾಡಬೇಕು, ಯುವಜನತೆ ಉತ್ತಮವಾದ ದಿಕ್ಕಿನಲ್ಲಿ ಸಾಗಬೇಕು. ಪೋಷಕರು ಮಕ್ಕಳಿಗೆ ಆಸ್ತಿಗಳನ್ನು ಮಾಡುವುದಕ್ಕಿಂತ ಮಿಗಿಲಾಗಿ ಅವರಿಗೆ ಗುಣಮಟ್ಟದ ಶಿಕ್ಷಣವನ್ನು ಕೊಡಿಸಿದರೆ ಅವರು ಸಮಾಜದ ಮುಂದಿನ ಭವಿಷ್ಯದ ದೀಪಗಳಾಗುತ್ತಾರೆ ಎಂದು ಹೇಳಿದರು.
ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು.
ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ರಘುನಾಥರೆಡ್ಡಿ, ವಿವೇಕಾನಂದ ವಿದ್ಯಾಸಂಸ್ಥೆಯ ಅಧ್ಯಕ್ಷ ಕೆ.ಎನ್.ರಾಮಾಂಜಿನಪ್ಪ, ಕಾರ್ಯದರ್ಶಿ ಎಂ.ಆರ್.ಶಿವಣ್ಣ, ಖಜಾಂಚಿ ಜಿ.ಪಿ.ಲಕ್ಷ್ಮೀಪತಿ, ನಿರ್ದೇಶಕರಾದ ಎಂ.ಎನ್.ಗೋಪಾಲಪ್ಪ, ಎಂ.ನಾಗರಾಜ್, ಸಿ.ನಾರಾಯಣಸ್ವಾಮಿ, ಸಿಎಂ.ದೇವರಾಜು, ಎಂ.ಕೆ.ಚಂದ್ರಶೇಖರ್ ಮುಂತಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.