Home News ವಿಶ್ವ ಹಾಲು ದಿನಾಚರಣೆಯ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಕೆ.ಎಂ.ಎಫ್‌ನ ಗುಡ್‌ ಲೈಫ್ ಹಾಲು ವಿತರಣೆ

ವಿಶ್ವ ಹಾಲು ದಿನಾಚರಣೆಯ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಕೆ.ಎಂ.ಎಫ್‌ನ ಗುಡ್‌ ಲೈಫ್ ಹಾಲು ವಿತರಣೆ

0

ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ವತಿಯಿಂದ ಸೋಮವಾರ ವಿಶ್ವ ಹಾಲು ದಿನಾಚರಣೆಯ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಕೆ.ಎಂ.ಎಫ್‌ನ ಗುಡ್‌ ಲೈಫ್‌ ಹಾಲನ್ನು ವಿತರಿಸಿದರು.
ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ದಾಖಲಾಗಿರುವ ರೋಗಿಗಳಿಗೆ ಕೋಚಿಮುಲ್ ನೂತನ ನಿರ್ದೇಶಕ ಬಂಕ್‌ಮುನಿಯಪ್ಪ ಹಾಲಿನ ಪಾಕೆಟ್‌ಗಳನ್ನು ವಿತರಣೆ ಮಾಡಿ, ಶೀಘ್ರವಾಗಿ ಗುಣಮುಖರಾಗುವಂತೆ ಹಾರೈಸಿದರು. ರೈತರು ಉತ್ಪಾದನೆ ಮಾಡುತ್ತಿರುವ ಗುಣಮಟ್ಟದ ಹಾಲನ್ನು ನಮ್ಮ ಡೈರಿಯ ಮುಖಾಂತರ ಮಾರಾಟ ಮಾಡುತ್ತಿದ್ದು, ಜನತೆ ಇಂತಹ ಗುಣಮಟ್ಟದ ಹಾಲನ್ನು ಖರೀದಿ ಮಾಡುವ ಮುಖಾಂತರ ಸಹಕಾರಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಬೇಕು. ವಿಶ್ವ ಹಾಲು ದಿನಾಚರಣೆಯ ಪ್ರಯುಕ್ತ ಏಳು ದಿನಗಳ ಕಾಲ ಹಾಲಿನ ಉತ್ಪನ್ನಗಳ ಸಿಹಿತಿಂಡಿಗಳನ್ನು ಶೇ ೧೦ ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತದೆ ಎಂದರು.
ಉಪವ್ಯವಸ್ಥಾಪಕ ಗೋಪಾಲರಾವ್, ಸಾರ್ವಜನಿಕ ಆಸ್ಪತ್ರೆಯ ಡಾ.ಅಮರೇಶ್‌ ಗದ್ದಿ, ವಿವಿದೋದ್ಧೇಶ ಸಹಕಾರ ಸಂಘಗಳ ಕಾರ್ಯದರ್ಶಿ ಕೆ.ವಿ.ರೆಡ್ಡಿ, ಓ.ಟಿ.ಮುನಿಕೃಷ್ಣಪ್ಪ, ಶ್ರೀನಿವಾಸ್‌, ರಮೇಶ್‌, ಮಂಜುನಾಥ್‌ ಈ ಸಂದರ್ಭದಲ್ಲಿ ಹಾಜರಿದ್ದರು.