Home News ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಉತ್ತಮ ಪ್ರತಿಕ್ರಿಯೆ

ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಉತ್ತಮ ಪ್ರತಿಕ್ರಿಯೆ

0

ತಾಲ್ಲೂಕಿನಲ್ಲಿ ಬುಧವಾರ ವಿವಿಧ ಸಂಘಟನೆಗಳ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ನಡೆಸಿದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಸಿಯಟಿಯು ಸಂಯೋಜಿತ ಅಂಗನವಾಡಿ, ಬಿಸಿಯೂಟ, ಗ್ರಾಮ ಪಂಚಾಯತಿ ನೌಕರರ ಸಂಘ, ಡಿವೈಎಫ್ಐ, ರೈತ ಸಂಘ, ಸಮಾನ ಮನಸ್ಕರ ಹೋರಾಟ ಸಮಿತಿ ಮುಂತಾದ ಸಂಘಟನೆಗಳ ಮುಖಂಡರು ನಗರದಲ್ಲಿ ಬೈಕ್ ರ್ಯಾಲಿ ನಡೆಸಿದರು.

ತಾಲ್ಲೂಕಿನಾದ್ಯಂತ ಮುಷ್ಕರ ಶಾಂತಿಯುತವಾಗಿ ನಡೆದಿದ್ದು, ನಗರದಲ್ಲಿ  ಕೆ.ಎಸ್.ಆರ್.ಟಿ.ಸಿ ಬಸ್ಗೆ ಕಿಡಿಗೇಡಿಗಳು ಕಲ್ಲು ತೂರಿದ ಘಟನೆ ನಡೆದಿದೆ. ಬಸ್ನ ಮುಂದಿನ ಗಾಜು ಒಡೆದಿದೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಲ್ಲೂಕಿನಾದ್ಯಂತ ಮುಷ್ಕರ ಶಾಂತಿಯುತವಾಗಿ ನಡೆದಿದ್ದು, ನಗರದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಗೆ ಕಿಡಿಗೇಡಿಗಳು ಕಲ್ಲು ತೂರಿದ ಘಟನೆ ನಡೆದಿದೆ. ಬಸ್ನ ಮುಂದಿನ ಗಾಜು ಒಡೆದಿದೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೋಟೆಲ್, ಅಂಗಡಿ ಮುಂಗಟ್ಟುಗಳು, ಥಿಯೇಟರ್, ಬ್ಯಾಂಕುಗಳು, ಶಾಲಾ ಕಾಲೇಜುಗಳು ಬಂದ್ ಆದ್ದರಿಂದಾಗಿ ನಗರದ ರಸ್ತೆಗಳು ಬಿಕೋ ಎನ್ನುತ್ತಿತ್ತು.
ಶಿಡ್ಲಘಟ್ಟದಲ್ಲಿ ಬುಧವಾರ ವಿವಿಧ ಸಂಘಟನೆಗಳ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ನಡೆಸಿದರು.
ಬಸ್, ಆಟೋ ಸಂಚಾರವಿಲ್ಲದೆ ಸಾರ್ವಜನಿಕರಿಗೆ ತೊಂದರೆಯಾಗಿತ್ತು. ಬಸ್ ನಿಲ್ದಾಣದ ಬಳಿ ರಸ್ತೆ ತಡೆ ನಡೆಸಿದ ವಿವಿಧ ಸಂಘಟನೆಗಳ ಸದಸ್ಯರು ರಸ್ತೆಯಲ್ಲೇ ಅಡುಗೆ ತಯಾರಿಸಿದರು. ಖಾಸಗಿ ವಾಹನಗಳನ್ನು ಈ ಮಾರ್ಗದಲ್ಲಿ ತಡೆಯಲಾಗಿತ್ತು.
‘ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಮದ್ಯಾಹ್ನ ಬಿಸಿಯೂಟ ತಯಾರಿಸುವ ಅಡುಗೆ ನೌಕರರ ಹಲವು ಸಮಸ್ಯೆಗಳನ್ನು ಕಳೆದ ಹಲವಾರು ವರ್ಷಗಳಿಂದಲೂ ಸರ್ಕಾರದ ಗಮನಕ್ಕೆ ತಂದರೂ ಪ್ರಯೋಜನವಾಗುತ್ತಿಲ್ಲ.
ಶಿಡ್ಲಘಟ್ಟ ಬಸ್ನಿಲ್ದಾಣದ ಬಳಿ ಬುಧವಾರ ವಿವಿಧ ಸಂಘಟನೆಗಳ ಸದಸ್ಯರು ರಸ್ತೆ ತಡೆ ನಡೆಸಿ ರಸ್ತೆಯಲ್ಲೇ ಅಡುಗೆ ತಯಾರಿಸಿದರು.
ಎಲ್ಲ ಗ್ರಾಮ ಪಂಚಾಯಿತಿ ನೌಕರರನ್ನು ಷರತ್ತು ಇಲ್ಲದೆ ನೇಮಕಾತಿಗೆ ಅನುಮೋದನೆ ನೀಡುವುದು ಹಾಗೂ ಈಗಾಗಲೆ ಕೆಲವು ನೌಕರರನ್ನು ಕೈಬಿಟ್ಟಿದ್ದು ಅವರನ್ನು ಪುನಃ ಸೇರಿಸಿಕೊಳ್ಳುವುದು, ನ್ಯಾಯಾಲಯದ ತೀರ್ಪಿನಂತೆ ಕನಿಷ್ಠ ವೇತನ ೧೫ ಸಾವಿರ ರೂಪಾಯಿಗಳನ್ನು ಕೊಡುವುದು. ಸಾಕಷ್ಟು ನೌಕರರಿಗೆ ವರ್ಷಗಳಿಂದಲೂ ಬಾಕಿ ವೇತನ ನೀಡಬೇಕಿದ್ದು ಕೂಡಲೆ ಬಾಕಿ ವೇತನವನ್ನು ಬಿಡುಗಡೆ ಮಾಡಬೇಕು. ಮುಂತಾದ ಹಲವು ಬೇಡಿಕೆಗಳ ಜೊತೆಗೆ, ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಮುಷ್ಕರ ನಡೆಸುತ್ತಿದ್ದೇವೆ’ ಎಂದು ಸಿ.ಐ.ಟಿ.ಯು ಜಿಲ್ಲಾ ಕಾರ್ಯದರ್ಶಿ ಲಕ್ಷ್ಮೀದೇವಮ್ಮ ತಿಳಿಸಿದರು.
ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮ ಪಂಚಾಯತಿಯ ನೌಕರರು ಬುಧವಾರ ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ಬೆಂಬಲಿಸಿದರು.
ಸಮಾನ ಮನಸ್ಕರ ಹೋರಾಟ ಸಮಿತಿ ಅಧ್ಯಕ್ಷ ಜೆ.ಎಸ್.ವೆಂಕಟಸ್ವಾಮಿ, ಕಾರ್ಯದರ್ಶಿ ಪ್ರತೀಶ್, ರೈತ ಸಂಘದ ತಾಲ್ಲೂಕು ಅಧ್ಯಕ್ಷ ರವಿಪ್ರಕಾಶ್, ಗ್ರಾಮ ಪಂಚಾಯತಿ ನೌಕರರ ಸಂಘದ ಅಧ್ಯಕ್ಷ ಸುದರ್ಶನ್, ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಅಶ್ವತ್ಥಮ್ಮ, ಬಿಸಿಯೂಟ ನೌಕರರ ಸಂಘದ ಅಧ್ಯಕ್ಷೆ ಮುನಿಲಕ್ಷ್ಮಮ್ಮ, ಆಶಾ ನೌಕರರ ಸಂಘದ ಕಾರ್ಯದರ್ಶಿ ಕಲಾವತಿ, ಪುರುಷೋತ್ತಮ್, ಡಿ.ವೈ.ಎಫ್.ಐ ರಾಜ್ಯ ಮುಖಂಡ ಮುನೀಂದ್ರ, ಸುರೇಶ್, ಪಾಪಣ್ಣ ಮತ್ತಿತರರು ಪ್ರತಿಭಟನಾ ರ್ಯಾಲಿಯಲ್ಲಿ ಹಾಜರಿದ್ದರು.