2014-15 ನೇ ಸಾಲಿನ 13 ನೇ ಹಣಕಾಸು ಆಯೋಗದ ಸಾಮಾನ್ಯ ಮೂಲ ಅನುದಾನದಡಿ ಬಿಡುಗಡೆಯಾಗಿರುವ ಹಣವನ್ನು ನಗರದ ಹೊರವಲಯದಲ್ಲಿ ಕೊಳವೆಬಾವಿಗಳನ್ನು ಕೊರೆಸುವುದು ಸೇರಿದಂತೆ ನೀರು ಸರಬರಾಜು ಕಾಮಗಾರಿಗಳಿಗೆ ಹಾಗೂ ಜನತೆಗೆ ಕುಡಿಯುವ ನೀರಿನ ಪೂರೈಕೆ ಮಾಡಲು ಅಗತ್ಯ ಕ್ರಮ ವಹಿಸಲು ತೀರ್ಮಾನಿಸಲಾಯಿತು.
2014-15 ನೇ ಸಾಲಿನ 13 ನೇ ಹಣಕಾಸು ಆಯೋಗದ ಸಾಮಾನ್ಯ ಮೂಲ ಅನುದಾನದಡಿ ಬಿಡುಗಡೆಯಾಗಿರುವ 93.19 ಲಕ್ಷ ರೂಗಳಲ್ಲಿ 23.30 ಲಕ್ಷ ರೂ ಹಣವನ್ನು ಘನತ್ಯಾಜ್ಯ ವಸ್ತುಗಳ ವಿಲೇವಾರಿಗಾಗಿ ಹಾಗು 10.5 ಲಕ್ಷ ರೂಗಳನ್ನು ಎಸ್‍ಟಿಪಿ ಯೋಜನೆಗೆ ಬಳಸಿಕೊಂಡು ಉಳಿದ 59.39 ಲಕ್ಷ ರೂಗಳಲ್ಲಿ ನಗರದ ಹೊರವಲಯದಲ್ಲಿ ಕೊಳವೆಬಾವಿಗಳನ್ನು ಕೊರೆಸಿ ನಗರದ ಜನತೆಗೆ ಕುಡಿಯುವ ನೀರಿನ ಪೂರೈಕೆ ಮಾಡಲು ಅಗತ್ಯ ಕ್ರಮ ವಹಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ನಗರದ ಜನಸಂದಣಿ ಇರುವ ರಸ್ತೆಗಳಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಿಸಬೇಕು ಎಂದು 10 ನೇ ವಾರ್ಡಿನ ಸದಸ್ಯ ಜೆ.ಎಂ.ಬಾಲಕೃಷ್ಣ ಅವರ ಪ್ರಸ್ತಾಪಕ್ಕೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಕೇಶವಮೂರ್ತಿ ಮಾತನಾಡಿ ನಗರದ ಕೋಟೆ ವೃತ್ತದಲ್ಲಿರುವ ಸರಕಾರಿ ಶಾಲೆಯ ಆವರಣದಲ್ಲಿ ನಿರ್ಮಿಸಲು ಸ್ಥಳಾವಕಾಶಕ್ಕಾಗಿ ಸಂಬಂದಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಮಿಸಲಾಗುವುದು ಎಂದರು.
ಪುರಸಭೆ ಉಪಾಧ್ಯಕ್ಷೆ ಸುಮಿತ್ರಮ್ಮರಮೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಕೇಶವಮೂರ್ತಿ, ಪುರಸಭೆ ಮುಖ್ಯಾಧಿಕಾರಿ ಎಸ್.ಎ.ರಾಮ್‍ಪ್ರಕಾಶ್, ಪುರಸಭೆ ಸದಸ್ಯರು ಹಾಗು ಸಿಬ್ಬಂದಿ ಸಭೆಯಲ್ಲಿ ಹಾಜರಿದ್ದರು.
ಆಯವ್ಯವಾದ ಪೂರ್ಣ ಮಾಹಿತಿಯನ್ನು ತಿಳಿಯಲು http://www.shidlaghattatown.gov.in/node/42 ವೀಕ್ಷಿಸಿ