ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದ ಅಂಗವಾಗಿ ಸೋಮವಾರ ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿ ಡಾಲ್ಫಿನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ಜಾಥಾ ನಡೆಸಿ ಕುಷ್ಠರೋಗ ನಿವಾರಣೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು.
‘ಕೈ ಕೈ ಜೋಡಿಸಿ, ಕುಷ್ಠ ನಿವಾರಿಸಿ’ ಎಂದು ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗುತ್ತಾ, ಕುಷ್ಠ ರೋಗದ ಬಗ್ಗೆ ಮಾಹಿತಿಯಿರುವ ಕರಪತ್ರವನ್ನು ವಿತರಿಸುತ್ತಾ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿದರು. ಕುಷ್ಠ ರೋಗವನ್ನು ಹೇಗೆ ಗುರುತಿಸಬಹುದು ಎಂಬ ವಿವರಣೆ, ಕುಷ್ಠ ರೋಗದ ನಿವಾರಣೆಗೆ ಬಹು ಔಷಧಿ ಚಿಕಿತ್ಸೆ ಮತ್ತು ಈ ಔಷಧಿಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಪಡೆಯಬಹುದು ಎಂಬುದನ್ನು ವಿವರಿಸುತ್ತಾ ಸಾಗಿದರು.