Home News ಕೃಷಿ ವಸ್ತು ಪ್ರದರ್ಶನ: ಸಾವಯವ ಕೃಷಿ ಉತ್ಪನ್ನಗಳ ಪ್ರದರ್ಶನ

ಕೃಷಿ ವಸ್ತು ಪ್ರದರ್ಶನ: ಸಾವಯವ ಕೃಷಿ ಉತ್ಪನ್ನಗಳ ಪ್ರದರ್ಶನ

0

ಕೃಷಿ ಇಲಾಖೆಯು ರೈತರ ಏಳಿಗೆಗೆ ಸಾಕಷ್ಟು ಯೊಜನೆಗಳನ್ನು ಜಾರಿಗೆ ತಂದಿದೆ. ಕೃಷಿ ಭಾಗ್ಯ ಇನ್ನಿತರೆ ಯೋಜನೆಗಳು ಕೃಷಿ ವಲಯದ ಅಭಿವೃದ್ಧಿಗೆ ಪೂರಕವಾಗಿದ್ದು ಅಂತಹ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಶಾಸಕ ಎಂ.ರಾಜಣ್ಣ ಮನವಿ ಮಾಡಿದರು.
ನಗರದ ರೇಷ್ಮೆ ಇಲಾಖೆಯ ಆವರಣದಲ್ಲಿ ಶುಕ್ರವಾರ ಕಸಬಾ ಹೋಬಳಿ ಮಟ್ಟದ ಕೃಷಿ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರೈತರು ಕೃಷಿ ಇಲಾಖೆಯಿಂದ ನಡೆಯುವ ತರಬೇತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತಿಳಿಯದ ಹೊಸ ಸಂಗತಿಗಳನ್ನು, ಕೃಷಿಯಲ್ಲಿನ ನೂತನ ಆವಿಷ್ಕಾರಗಳ ಬಗ್ಗೆ ತಿಳಿದು ಕಡಿಮೆ ವೆಚ್ಚದಲ್ಲಿ ಹೆಚ್ಚು ಉತ್ಪಾದಿಸಿ ಅಧಿಕ ಲಾಭಗಳಿಸುವ ಕೆಲಸ ಆಗಬೇಕಿದೆ ಎಂದರು.
ಸಾವಯವ ಕೃಷಿ ಪದ್ಧತಿಯಲ್ಲಿ ಬೆಳೆದ ಮಾವು, ಸಫೋಟ, ಬಜ್ಜಿ ಮೆಣಸು, ಸೌತೆಕಾಯಿ ಮುಂತಾದ ತರಕಾರಿ, ಸಜ್ಜೆ, ರಾಗಿ ಮೊದಲಾದ ಕಾಳುಗಳನ್ನು ವೀಕ್ಷಿಸಲು ಅನುವು ಮಾಡಿಕೊಡಲಾಗಿತ್ತು. ಕೃಷಿ, ತೋಟಗಾರಿಕೆ, ರೇಷ್ಮೆ, ಪಶುವೈಧ್ಯಕೀಯ, ಮೀನುಗಾರಿಕೆ ಇಲಾಖೆಯ ಯೋಜನೆಗಳ ಬಗ್ಗೆ ಈ ಸಂದರ್ಭದಲ್ಲಿ ಅರಿವು ಮೂಡಿಸಲಾಯಿತು. ರೈತರೊಂದಿಗೆ ಕೃಷಿ ತಜ್ಞರ ಸಂವಾದ ನಡೆಯಿತು.
ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ನಿರ್ಮಲಮುನಿರಾಜು, ಸದಸ್ಯರಾದ ಬಂಕ್‌ಮುನಿಯಪ್ಪ, ತನುಜಾರಘು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಲಕ್ಷ್ಮೀನಾರಾಯಣ್, ಎಚ್‌.ಜಿ.ಗೋಪಾಲಗೌಡ, ಕೃಷಿ, ರೇಷ್ಮೆ, ತೋಟಗಾರಿಕೆ ಅಧಿಕಾರಿಗಳು ಹಾಜರಿದ್ದರು.