ಪಟ್ಟಣದ ಸರಸ್ವತಿ ಕಾನ್ವೆಂಟ್ ಪ್ರೌಢಶಾಲೆಯಲ್ಲಿ ಬುಧವಾರ ತಾಲ್ಲೂಕಿನ ಎಲ್ಲಾ ಪ್ರೌಢಶಾಲೆಗಳ ಗಣಿತ ಮತ್ತು ವಿಜ್ಞಾನ ಶಿಕ್ಷಕರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಸಹಯೋಗದಲ್ಲಿ ನುರಿತ ವಿಷಯ ತಜ್ಞರಿಂದ ಎರಡು ದಿನಗಳ ವಿಶೇಷ ಕಲಿಕಾ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಈ ವಿಶೇಷ ಕಾರ್ಯಾಗಾರದ ಉದ್ಘಾಟನೆ ನೆರವೇರಿಸಿದ ಕ್ಷೇತ್ರಶಿಕ್ಷಣಾಧಿಕಾರಿ ಎಸ್. ರಘುನಾಥರೆಡ್ಡಿರವರು ಎಲ್ಲಾ ಶಿಕ್ಷಕರೂ ತಮ್ಮ ಜವಾಬ್ದಾರಿಗಳನ್ನು ಅರಿತುಕೊಂಡು ತಮ್ಮ ಕರ್ತವ್ಯಗಳಿಗೆ ಯಾವುದೇ ರೀತಿಯಲ್ಲಿಯೂ ಚ್ಯುತಿತರದೆ ಮಕ್ಕಳ ಭವಿಷ್ಯವನ್ನು ರೂಪಿಸುವುದರಲ್ಲಿ ಭಾಗವಹಿಸಬೇಕೆಂದು ಕರೆ ನೀಡಿದರು. ಕಾರ್ಯಾಗಾರದ ಸದುಪಯೋಗಪಡೆದುಕೊಂಡು ವಿದ್ಯಾರ್ಥಿಗಳ ಜ್ಞಾನವಿಕಸನಗೊಳಿಸುವುದರಲ್ಲಿ ಬಳಸಿಕೊಳ್ಳಬೇಕೆಂದು ತಿಳಿಸಿದರು.
ವಿಷಯ ಪರಿವೀಕ್ಷಕರಾದ ಉಸ್ಮಾನ್ ಸಾಬ್, ಸರಸ್ವತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಎನ್. ವೆಂಕಟಸುಬ್ಬರಾವ್, ಕಾರ್ಯದರ್ಶಿ ಎನ್. ಶ್ರೀಕಾಂತ್, ಮುಖ್ಯಶಿಕ್ಷಕಿ ವಿ. ಸೀತಾಲಕ್ಷ್ಮಿ, ವಿಷಯ ಪರಿಣಿತರಾದ ಪ್ರೊ. ವೇಣುಗೋಪಾಲ್, ಪ್ರೊ. ಅರುಣಾಚಲಂ, ಪ್ರೊ. ಅಶ್ರಫ್ ಅಲಿ, ಪ್ರೊ. ಚಂದ್ರಿಕಾ, ವಿಜ್ಞಾನ ಶಿಕ್ಷಕ ಬಾಲಗಂಗಾಧರ ತಿಲಕ್, ಸುಂದರನ್, ಶಾಮಣ್ಣ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -