ರಾಜ್ಯದಲ್ಲಿ ಕನ್ನಡ ಭಾಷೆ ಇನ್ನೂ ಉಳಿದಿದೆಯೆಂದರೆ ಅದು ಕೇವಲ ಗ್ರಾಮೀಣ ಪ್ರದೇಶಗಳಿಂದ ಮಾತ್ರ ಎಂದು ತಾಲೂಕು ಕಸಾಪ ಅಧ್ಯಕ್ಷ ಬಿ.ಆರ್. ಅನಂತಕೃಷ್ಣ ಹೇಳಿದರು.
ತಾಲೂಕಿನ ಹರಳಹಳ್ಳಿ ಗ್ರಾಮದಲ್ಲಿ ಶನಿವಾರ ಗ್ರಾಮದ ಜೈ ಭುವನೇಶ್ವರಿ ಕನ್ನಡ ಕಲಾ ಸಂಘದ ವತಿಯಿಂದ ಆಯೋಜಿಸಲಾಗಿದ್ದ 3 ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕನ್ನಡ ನಾಡು, ನುಡಿಯ ರಕ್ಷಣೆ ಹಾಗೂ ಗಡಿಭಾಗಗಳ ರಕ್ಷಣೆ ಪ್ರತಿಯೊಬ್ಬ ಯುವಕರ ಆದ್ಯ ಕರ್ತವ್ಯ ಎಂದ ಅವರು ರಾಜ್ಯದ ಗಡಿ, ನೆಲ, ಜಲ, ಭಾಷೆ, ಸಂಸ್ಕøತಿ, ಪರಂಪರೆಯನ್ನು ಉಳಿಸಿಬೆಳೆಸುವಂತಹ ಹೊಣೆಗಾರಿಕೆ ಪ್ರತಿಯೊಬ್ಬ ನಾಗರೀಕರ ಮೇಲಿದೆ. ಅದರಲ್ಲೂ ವಿಶೇಷವಾಗಿ ಯುವಜನತೆ ನಾಡಿನ ಬಗ್ಗೆ ಹೆಚ್ಚು ಕಾಳಜಿ ವಹಿಸಿ ಕೆಲಸ ಮಾಡಬೇಕಾಗಿದೆ ಎಂದರು.
ಇಂದು ಬದಲಾಗುತ್ತಿರುವ ಜನರ ಜೀವನಶೈಲಿಯಿಂದಾಗಿ ನಗರ ಪ್ರದೇಶಗಳಲ್ಲಿ ಕನ್ನಡ ಭಾಷೆಯನ್ನು ಹುಡುಕಾಡಬೇಕಾದಂತಹ ದುಸ್ಥಿತಿ ಒದಗಿ ಬಂದಿದೆ. ಕನ್ನಡ ಭಾಷೆಯ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸುವ ಮೂಲಕ ರಾಜ್ಯದಲ್ಲಿನ ಎಲ್ಲಾ ಸರ್ಕಾರಿ ಆದೇಶಗಳನ್ನು ಕನ್ನಡ ಭಾಷೆಯಲ್ಲಿಯೆ ಹೊರಡಿಸಬೇಕು ಎಂದರು.
ತಾಲೂಕು ಕಸಾಪ ಕಾರ್ಯದರ್ಶಿ ಎ.ಎಂ. ತ್ಯಾಗರಾಜ್, ಗ್ರಾಮದ ರಾಮೇಗೌಡ, ಸೊಣ್ಣೇಗೌಡ, ಕೃಷ್ಣಪ್ಪ, ಕೆ.ವಿ. ನಾರಾಯಣಸ್ವಾಮಿ, ನಂದೀಶ್, ಮಹೇಶ್, ಶ್ರೀನಿವಾಸ್, ಶ್ರೀನಾಥ್, ಚನ್ನಪ್ಪ ಮತ್ತಿತರರು ಹಾಜರಿದ್ದರು.
- Advertisement -
- Advertisement -
- Advertisement -