Home News ನಿಸ್ವಾರ್ಥ ಸೇವೆಯೇ ಆದರ್ಶವಾಗಬೇಕು

ನಿಸ್ವಾರ್ಥ ಸೇವೆಯೇ ಆದರ್ಶವಾಗಬೇಕು

0

ನಿಸ್ವಾರ್ಥದಿಂದ ದೇಶದ ಕೃಷ್ಠರೋಗಿಗಳ ಆರೈಕೆ ಮಾಡಿ ಸಂತರಾದ ಮದರ್‌ ತೆರೆಸಾ ಮತ್ತು ಹರಿಜನರ ಏಳಿಗೆಗಾಗಿ ಶ್ರಮಿಸಿದ ಮಹಾತ್ಮಾ ಗಾಂಧೀಜಿ ನಮಗೆ ಆದರ್ಶವಾಗಬೇಕು. ಇದುವೇ ರಾಷ್ಟ್ರೀಯ ಸೇವಾ ಯೋಜನೆ ಉದ್ದೇಶ ಎಂದು ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯದರ್ಶಿ ಮುನಿರಾಜು ತಿಳಿಸಿದರು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈಚೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನಾ ದಿನಾಚಾರಣೆಯಲ್ಲಿ ಅವರು ಮಾತನಾಡಿದರು. ಮದರ್ ತೆರೆಸಾ, ಸ್ವಾಮಿ ವಿವೇಕಾನಂದ, ರಾಮಕೃಷ್ಣ ಪರಮಹಂಸರು, ಮಹಾತ್ಮಗಾಂದೀಜಿರವರು ಸಮಾಜದ ಸುಧಾರಣೆಗೆ ನಿಸ್ವಾರ್ಥವಾಗಿ ದುಡಿದು ಮಹಾತ್ಮರಾದರು. ಮಹಾತ್ಮ ಗಾಂದೀಜಿಯವರ ಕನಸಿನ ಕೂಸು ರಾಷ್ಟ್ರೀಯ ಸೇವಾ ಯೋಜನೆಯಾಗಿದೆ ಎಂದರು.
ಗ್ರಾಮೀಣ ಪ್ರದೇಶಗಳ ಜನತೆ ಅಭಿವೃದ್ಧಿ ಹೊಂದಿದರೆ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾದ್ಯ. ಈ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶಗಳ ಜನತೆ ಪ್ರಾಮಾಣಿಕತೆ, ನಂಬಿಕೆ ಹಾಗೂ ಮುಗ್ದತೆಗೆ ಹೆಸರಾಗಿದ್ದು ಅವರಲ್ಲಿ ಅರಿವು ಮೂಡಿಸುವ ಸಲುವಾಗಿ ಏಳು ದಿನಗಳ ಕಾಲ ಗ್ರಾಮೀಣ ಪ್ರದೇಶಗಳಲ್ಲಿ ಶಿಬಿರವನ್ನು ಏರ್ಪಡಿಸಿದೆ. ಪ್ರತಿ ದಿನ ಒಂದೊಂದು ಇಲಾಖೆ ವತಿಯಿಂದ ಮಾಹಿತಿ ನೀಡುವುದು, ಗ್ರಾಮದ ಜನತೆಯೊಂದಿಗೆ ಬೆರತು ಸ್ವಚ್ಛತೆ ಕಾರ್ಯಗಳನ್ನು ಮಾಡುವುದು, ಸರ್ಕಾರಗಳ ಯೋಜನೆಗಳ ಬಗ್ಗೆ ಹಾಗೂ ಗ್ರಾಮದ ನಿರ್ವಹಣೆಗಳ ಬಗ್ಗೆ ಜನತೆಗೆ ಅರಿವು ಮೂಡಿಸುವಂತಹ ಸಮಾಜಿಕ ಸೇವೆ ಮಾಡುವುದು ರಾಷ್ಟ್ರೀಯ ಸ್ವಯಂಸೇವಾ ಯೋಜನೆಯ ಉದ್ದೇಶವಾಗಿದೆ ಎಂದರು.
ರಾಷ್ಟ್ರೀಯ ಸೇವಾ ಯೋಜನಾ ಘಟಕಗಳಲ್ಲಿ ಭಾಗವಹಿಸಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುವ ಮೂಲಕ ನಿಮ್ಮ ತಂದೆ ತಾಯಂದಿರಿಗೂ, ಕಾಲೇಜಿಗೂ ಹಾಗೂ ಗ್ರಾಮಕ್ಕೂ ಕೀರ್ತಿ ತರಬೇಕೆಂದರು.
ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಆನಂದ್‌ ಮಾತನಾಡಿ, ರಾಜ್ಯಾದ್ಯಂತ ೭೭೦ ಪದವಿಪೂರ್ವ ಕಾಲೆಜುಗಳಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದು, ೭೮ ಸಾವಿರ ವಿದ್ಯಾರ್ಥಿಗಳು ಸಕ್ರೀಯವಾಗಿ ಭಾಗವಹಿಸಿ ಸಮಾಜ ಸೇವೆಯಲ್ಲಿ ತೊಡಗಿದ್ದಾರೆ. ವಾರ್ಷಿಕ ವಿಶೇಷ ಶಿಬಿರಗಳಲ್ಲಿ ಹೆಚ್ಚು ಹೆಚ್ಚು ಭಾಗವಹಿಸುವ ಮೂಲಕ ನಾಯಕತ್ವ ಗುಣಗಳು ಬೆಳೆಸಿಕೊಳ್ಳಬಹುದು. ಗ್ರಾಮೀಣ ಪ್ರದೇಶಗಳಲ್ಲಿ ವಾಸಮಾಡುವ ಅನಕ್ಷರಸ್ಥರಿಗೆ ಸಂವಹನ ಮಾಡಲು ಅವಕಾಶಗಳು ದೊರೆಯುತ್ತವೆ. ಗ್ರಾಮ ನೈರ್ಮಲ್ಯ, ಸ್ವಚ್ಛತೆ ಮತ್ತು ಸಾಕ್ಷರತೆ ಬಗ್ಗೆ ಅರಿವು ಮೂಡಿಸುವುದು, ಗ್ರಾಮೀಣ ಪ್ರದೇಶಗಳ ಜನತೆಯಲ್ಲಿ ಬೆರೆತು ಅವರ ಕಷ್ಟಗಳನ್ನು ಅರಿತು ಕೈಲಾದ ಸೇವೆ ಮಾಡುವುದು ಶಿಬಿರದ ಉದ್ದೇಶವಾಗಿದೆ ಎಂದರು.
ಶಿಬಿರದಲ್ಲಿ ದೈನಂದಿನ ಕೆಲಸ ಕಾರ್ಯಗಳ ಜೊತೆ ಪ್ರತಿ ದಿನ ಒಬ್ಬೊಬ್ಬ ವಿಷಯ ಪರಿಣಿತರನ್ನು ಆಹ್ವಾನಿಸಿ ಹೊಸ ವಿಷಯದ ಬಗ್ಗೆ ಮಾಹಿತಿ ನೀಡಲಾಗುವುದು. ಶಿಬಿರದಲ್ಲಿ ಭಾಗವಹಿಸಿ ಸೃಜನ ಶೀಲತೆ, ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳುವುದರೊಂದಿಗೆ ಆದರ್ಶ ವಿದ್ಯಾರ್ಥಿಗಳಾಗಿ ಹೊರಹೊಮ್ಮಲು ಸಾಕಷ್ಟು ಅವಕಾಶಗಳಿದ್ದು, ಇವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದರು.
ಸಮಾಜ ಶಾಸ್ತ್ರ ಉಪನ್ಯಾಸಕ ಲಕ್ಷ್ಮಣ್, ಇತಿಹಾಸ ಉಪನ್ಯಾಸಕ ಲೋಕೇಶ್, ಉಪನ್ಯಾಸಕ ದೇವರಾಜ್ ಈ ಸಂದರ್ಭದಲ್ಲಿ ಹಾಜರಿದ್ದರು.