ನಗರದ ಅಯೋಧ್ಯಾನಗರ ಶಿವಾಚಾರ್ಯ ವೈಶ್ಯ ನಗರ್ತ ಮಂಡಳಿಯ ವತಿಯಿಂದ ಪಾರ್ವತಿದೇವಿ ಮತ್ತು ನಗರೇಶ್ವರಸ್ವಾಮಿಯ ಕಲ್ಯಾಣೋತ್ಸವ ಮತ್ತು ವಾರ್ಷಿಕೋತ್ಸವವನ್ನು ಬುಧವಾರ ವಿಜೃಂಭಣೆಯಿಂದ ಆಚರಿಸಲಾಯಿತು.
ಪುರಾಣ ಪ್ರಸಿದ್ಧ ನಗರೇಶ್ವರಸ್ವಾಮಿ ದೇವಾಲಯದಲ್ಲಿ ಮಂಗಳವಾರದಿಂದ ಗುರುವಾರದವರೆಗೆ ಮೂರು ದಿನಗಳ ಕಾಲ ನಡೆಯುವ ಪೂಜಾ ಮಹೋತ್ಸವದಲ್ಲಿ ನಗರ ಹಾಗೂ ತಾಲ್ಲೂಕಿನ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿ ಪಾಲ್ಗೊಂಡರು.
ಮುಂಜಾನೆಯಿಂದ ಪ್ರಾರಂಭಗೊಂಡ ಪೂಜಾ ಕಾರ್ಯಕ್ರಮದಲ್ಲಿ ಅಗ್ರೋದಕ, ಗಂಗಾಪೂಜೆ, ಗ್ರಾಮ ಪ್ರದಕ್ಷಿಣೆ, ಗಣಪತಿ ಪೂಜೆ, ಸ್ವಸ್ತಿವಾಚನ ನಾಂದಿ, ಋತ್ವಿಕ್ ವರಣ, ಪಂಚಗವ್ಯ ಪ್ರಾಸನ, ರಕ್ಷಾಬಂಧನ, ಅಸ್ರರಾಜಪೂಜೆ, ನವಗ್ರಹಪೂಜೆ, ಪ್ರಧಾನ ಕಳಶಗಳ ಪೂಜೆ, ಗಣ ಹೋಮ, ವಾಸ್ತು ಹೋಮ, ನವಗ್ರಹಹೋಮ, ಮಹಾಮಂಗಳಾರತಿ ಮತ್ತು ತೀರ್ಥಪ್ರಸಾದವನ್ನು ವಿನಿಯೋಗಿಸಲಾಯಿತು.
ರುದ್ರಾಭಿಷೇಕದ ನಂತರ ಪಾರ್ವತಿದೇವಿ ಮತ್ತು ನಗರೇಶ್ವರಸ್ವಾಮಿಯ ಕಲ್ಯಾಣೋತ್ಸವ ದೇವರ ಮೆರವಣಿಗೆ ಮತ್ತು ಶಯನೋತ್ಸವವನ್ನು ಭಕ್ತರು ಶ್ರದ್ಧಾಭಕ್ತಿಯಿಂದ ನೆರವೇರಿಸಿದರು.
ಅಯೋಧ್ಯಾನಗರ ಶಿವಾಚಾರ್ಯ ವೈಶ್ಯ ನಗರ್ತ ಮಂಡಳಿಯ ಅಧ್ಯಕ್ಷ ಕೆ.ಆರ್.ಶಿವಶಂಕರ್, ಕಾರ್ಯದರ್ಶಿ ವಿನಾಯಕ, ಉಪಾಧ್ಯಕ್ಷ ನಾಗರಾಜ್, ಮಂಜುನಾಥ್, ಮಲ್ಲಿಕಾರ್ಜುನ, ದೇವರಾಜು, ಮಹಿಳಾ ಮಂಡಳಿ ಸದಸ್ಯರು ಮತ್ತಿತರರು ಹಾಜರಿದ್ದರು.
- Advertisement -
- Advertisement -
- Advertisement -
- Advertisement -