ನಮ್ಮ ಠಾಣೆಗೆ 40 ಪೇದೆಗಳ ಅಗತ್ಯವಿದ್ದು ಕೇವಲ 20 ಮಂದಿ ಇರುವುದರಿಂದ ಅವರಿಗೆ ಕೆಲಸದ ಒತ್ತಡ ಹೆಚ್ಚಿರುತ್ತದೆ. ಹಾಗಾಗಿ ಪೇದೆಗಳಿಗೆ ರಜೆಗಳನ್ನು ನೀಡಲಾಗದೆ ಅವರಿಂದ ಹೆಚ್ಚು ಕೆಲಸ ಮಾಡಿಸಬೇಕಾಗಿದೆ ಎಂದು ಪುರಠಾಣೆ ಸಬ್‌ಇನ್ಸ್‌ಪೆಕ್ಟರ್ ಪುರುಷೋತ್ತಮ್ ತಿಳಿಸಿದರು.
ಪುರಠಾಣೆಯಲ್ಲಿ ಭಾನುವಾರ ಬಡ್ತಿ ಪಡೆದು ವರ್ಗಾವಣೆಗೊಂಡ ನಾಲ್ವರು ಪೊಲೀಸ್ ಸಿಬ್ಬಂದಿಯ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು. ಠಾಣೆಯಲ್ಲಿ ಇದ್ದ ಒಬ್ಬ ಮಹಿಳಾ ಸಿಬ್ಬಂದಿಯ ವರ್ಗಾವಣೆಯಿಂದಾಗಿ ಅವರ ಕೊರತೆಯುಂಟಾಗಿದೆ. ಎಲ್ಲಿದ್ದರೂ ಉತ್ತಮವಾಗಿ ಕಾರ್ಯವನ್ನು ನಿರ್ವಹಿಸಿ ಇಲಾಖೆಗೆ ಒಳ್ಳೆಯ ಹೆಸರನ್ನು ತರಬೇಕೆಂದು ಹೇಳಿದರು.
ಮುಖ್ಯಪೇದೆಯಿಂದ ಎ.ಎಸ್.ಐ ಆಗಿ ಬಡ್ತಿಹೊಂದಿದ ನಾರಾಯಣಪ್ಪ, ಪೇದೆಯಿಂದ ಮುಖ್ಯಪೇದೆಯಾಗಿ ಬಡ್ತಿಹೊಂದಿದ ನಾಗರಾಜ್ ಮತ್ತು ಶ್ರೀನಿವಾಸ್ ಹಾಗೂ ವರ್ಗಾವಣೆಗೊಂಡ ಮುಖ್ಯಪೇದೆ ಚಂದ್ರಕಲಾ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.
ಈ ಸಂದರ್ಭದಲ್ಲಿ ಪುರಠಾಣೆ ಪೊಲೀಸ್ ಸಿಬ್ಬಂದಿ ಹಾಜರಿದ್ದರು
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -