ಮಕ್ಕಳು ತಮ್ಮ ಅನುಭವವನ್ನು ಅಕ್ಷರ ರೂಪಕ್ಕಿಳಿಸುವಂತೆ ಮಾಡುವ ಮೂಲಕ ಅವರನ್ನು ಸಾಹಿತ್ಯದೆಡೆಗೆ ಆಸಕ್ತಿಯನ್ನು ಮೂಡಿಸಬಹುದು ಹಾಗೂ ಅವರ ಸೃಜನಶೀಲತೆಯನ್ನು ವೃದ್ಧಿಸಬಹುದಾಗಿದೆ ಎಂದು ಕಸಾಪ ತಾಲ್ಲೂಕು ಅಧ್ಯಕ್ಷ ಬಿ.ಆರ್.ಅನಂತಕೃಷ್ಣ ತಿಳಿಸಿದರು.
ತಾಲ್ಲೂಕಿನ ಚಿಕ್ಕದಾಸೇನಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಕಸಾಪ ತಾಲ್ಲೂಕು ಘಟಕದಿಂದ ಹಮ್ಮಿಕೊಂಡಿದ್ದ ಶಾಲೆಗೊಂದು ಕನ್ನಡ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪಠ್ಯದೊಡನೆ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳು ತೊಡಗಿಸಿಕೊಂಡಷ್ಟೂ ಅವರ ಚುರುಕುತನ ಹೆಚ್ಚುತ್ತದೆ. ಓದುವ ಹವ್ಯಾಸವನ್ನು ಚಿಕ್ಕಂದಿನಿಂದಲೇ ರೂಢಿಸಿಕೊಂಡಾಗ ಮುಂದೆ ಅವರು ಪಕ್ವತೆಯನ್ನು ಹೊಂದಲು ಸಹಕಾರಿಯಾಗುತ್ತದೆ. ನಮ್ಮ ಭಾಷೆ, ಸಂಸ್ಕೃತಿಯ ಬೇರು ಗಟ್ಟಿಯಾಗಿದ್ದಾಗ ಮಾತ್ರ ನಮ್ಮ ವ್ಯಕ್ತಿತ್ವ ರೂಪುಗೊಳ್ಳಲು ಸಾಧ್ಯ ಎಂದು ಹೇಳಿದರು.
ಶಾಲಾ ವಿದ್ಯಾರ್ಥಿಗಳು ಕನ್ನಡದ ಗೀತೆಗಳನ್ನು ಹಾಡಿದರು. ಹಾಡು ಹಾಡಿದ ಮಕ್ಕಳಿಗೆ ಕಸಾಪ ವತಿಯಿಂದ ಪುಸ್ತಕಗಳನ್ನು ನೀಡಲಾಯಿತು. ಕಸಾಪ ತಾಲ್ಲೂಕು ಘಟಕದಿಂದ ರತ್ನಕೋಶ, ಕನ್ನಡ ಮಾತನಾಡುವ ಬಗೆ, ಉಕ್ತಲೇಖನ ಬರೆಯುವ ಬಗೆ ಮುಂತಾದ ಪುಸ್ತಕಗಳನ್ನು ಶಾಲಾ ಗ್ರಂಥಾಲಯಕ್ಕೆ ನೀಡಲಾಯಿತು. ಗ್ರಾಮಸ್ಥರು, ಶಾಲಾಭಿವೃದ್ಧಿ ಸಮಿತಿ ಹಾಗೂ ಶಾಲೆಯ ವತಿಯಿಂದ ಕಸಾಪ ತಾಲ್ಲೂಕು ಅಧ್ಯಕ್ಷ ಬಿ.ಆರ್.ಅನಂತಕೃಷ್ಣ ಅವರನ್ನು ಸನ್ಮಾನಿಸಲಾಯಿತು. ಜಾನಪದ ಗಾಯಕ ದೇವರಮಳ್ಳೂರು ಮಹೇಶ್ ಜಾನಪದ ಗೀತೆಗಳನ್ನು ಹಾಡಿದರು.
ಕಸಾಪ ತಾಲ್ಲೂಕು ಉಪಾಧ್ಯಕ್ಷ ಚೌಡಸಂದ್ರ ಪಿ.ಈ. ಕರಗಪ್ಪ, ಕಾರ್ಯದರ್ಶಿ ಎ.ಎಂ.ತ್ಯಾಗರಾಜ್, ಕಸಬಾ ಹೋಬಳಿ ಪತ್ರಿಕಾ ಪ್ರತಿನಿಧಿ ನರಸಿಂಹಗೌಡ, ಎಸ್‌ಡಿಎಂಸಿ ಅಧ್ಯಕ್ಷ ಮುನೇಗೌಡ, ಗ್ರಾಮ ಪಂಚಾಯಿತಿ ಸದಸ್ಯ ನರಸಿಂಹಗೌಡ, ನರಸಿಂಹಮೂರ್ತಿ, ವೆಂಕಟೇಶ್, ರಾಜಣ್ಣ, ಲೋಕೇಶ್, ಸಂತೋಷ್, ಮುಖ್ಯ ಶಿಕ್ಷಕ ಕೆ.ಮಂಜುನಾಥ್, ಶಿಕ್ಷಕಿ ಸುಜಾತ ಮತ್ತಿತರರು ಹಾಜರಿದ್ದರು.
- Advertisement -
- Advertisement -
- Advertisement -
- Advertisement -