‘ಆಡಳಿತದ ಕೇಂದ್ರ ಸ್ಥಾನ ಇಡೀ ಕ್ಷೇತ್ರವನ್ನೇ ಪ್ರತಿನಿಧಿಸುತ್ತದೆ’ ಎಂಬ ಮಾತಿಗೆ ಪೂರಕವಾಗಿ ಮಾದರಿಯಾಗಿದೆ ತಾಲ್ಲೂಕಿನ ಮೇಲೂರು ಪಂಚಾಯಿತಿ ಕಚೇರಿ.
ಹಸಿರು ಗಿಡಮರಗಳು, ಹೂವರಳಿ ನಿಂತಿರುವ ಹೂಗಿಡಗಳು, ಒಪ್ಪವಾಗಿ ಕತ್ತರಿಸಿ ಆಕಾರವನ್ನು ನೀಡಲಾಗಿರುವ ಬೇಲಿ ಗಿಡಗಳು, ಮೆತ್ತನೆಯ ಹುಲ್ಲುಹಾಸು, ಇವುಗಳೆಲ್ಲದರ ನಡುವೆ ಕೆಂಪು ಬಣ್ಣದ ಕಟ್ಟಡ ಆಕರ್ಷಕವಾಗಿ ಕಾಣಿಸುತ್ತದೆ. ಆವರಣದಲ್ಲಿನ ಹಸಿರು ವಾತಾವರಣ ಮತ್ತು ಸೌರ ವಿದ್ಯುತ್ ದೀಪಗಳು ಪರಿಸರ ಪ್ರೇಮವನ್ನು ವ್ಯಕ್ತಪಡಿಸುತ್ತವೆ.
ಗ್ರಾಮ ಪಂಚಾಯಿತಿ ಕಚೇರಿ, ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿ, ಅಂಗನವಾಡಿ ಮತ್ತು ಗ್ರಂಥಾಲಯ ಒಂದೇ ಆವರಣದೊಳಗೆ ಗಿಡಮರಗಳ ನಡುವೆ ಇವೆ. ಪಂಚಾಯಿತಿ ಕಚೇರಿಯೊಳಗೆ ಗಣಕ ಕೊಠಡಿ, ಅಧಿಕಾರಿಗಳು ಮತ್ತು ಅಧ್ಯಕ್ಷರ ಕೊಠಡಿ ಹಾಗೂ ಸಭೆ ನಡೆಸುವ ವಿಶಾಲ ಕೊಠಡಿಯಿದೆ.
‘ಎಚ್.ಎಂ.ಕೃಷ್ಣಮೂರ್ತಿ ಅವರು ಪ್ರಧಾನರಾಗಿದ್ದ ಕಾಲದಲ್ಲಿ ಡಿಸೆಂಬರ್ ೧೯೯೦ ರಲ್ಲಿ ಪಂಚಾಯಿತಿ ಕಟ್ಟಡದ ಶಂಕುಸ್ಥಾಪನೆಯನ್ನು ಮಾಡಿ ಕಟ್ಟಡವನ್ನು ಕಟ್ಟಲಾಗಿತ್ತು. ಹಿಂದೆ ಹತ್ತಿರದ್ಲಲಿ ಕುಂಟೆ ಇದುದರಿಂದಾಗಿ ಕಟ್ಟಡ ಬಿರುಕು ಬಿಟ್ಟು ಶಿಥಿಲವಾಗತೊಡಗಿತ್ತು. ೨೦೦೯ರಲ್ಲಿ ನಾನು ಗ್ರಾಮ ಪಂಚಾಯಿತಿ ಅಧ್ಯಕ್ಷನಾದ ಅವಧಿಯಲ್ಲಿ ನವೀಕರಣವನ್ನು ಮಾಡಲಾಯಿತು. ಗ್ರಾಮದ ರಾಜ್‌ಕುಮಾರ್ ಸಂಘದ ಸದಸ್ಯರು ಕಟ್ಟಡಕ್ಕೆ ಟೆರ್ರಾಕೋಟ ಬಣ್ಣವೇ ಇರಬೇಕು ಎಂದು ಕಟ್ಟಡದ ಅಂದ ಚಂದಕ್ಕಾಗಿ ಬಣ್ಣಗಳ ಆಯ್ಕೆಯನ್ನು ಮಾಡಿದರು. ಹಸಿರು ಪರಿಸರವನ್ನು ನಿರ್ಮಿಸಲು ಪಂಚಾಯಿತಿ ಸದಸ್ಯರು ಮತ್ತು ಗ್ರಾಮಸ್ಥರು ನೆರವಾದರು. ಪಂಚಾಯಿತಿಗೆ ನಿಶ್ಚಿತ ವರಮಾನವಿದ್ದರೆ ಮಾತ್ರ ಇವೆಲ್ಲವುಗಳ ನಿರ್ವಹಣೆ ಸಾಧ್ಯವೆಂದು ಐದು ಅಂಗಡಿಗಳನ್ನು ಕಟ್ಟಿದೆವು. ಈಗ ಅದರಿಂದ ತಿಂಗಳಿಗೆ ರೂ.೭,೫೦೦ ಬಾಡಿಗೆ ಬರುತ್ತಿದೆ. ರುದ್ರಭೂಮಿಯಲ್ಲಿ ಅರ್ಧ ಎಕರೆಯಷ್ಟು ಮುಳ್ಳು ಹಾಗೂ ಕಳ್ಳಿಗಿಡ ಆವರಿಸಿತ್ತು. ಅವನ್ನು ಸ್ವಚ್ಛಗೊಳಿಸಿ ೪೦ ಸಸಿಗಳನ್ನು ನೆಡಿಸಿದ್ದೆವು. ಈಗ ಅವು ಮರಗಳಾಗಿವೆ. ಅಲ್ಲಿ ಕೈಕಾಲು ತೊಳೆಯಲು ನೀರಿನ ಸಿಸ್ಟರ್ನ್ ಕೂಡ ಇರಿಸಿದ್ದೇವೆ. ನಮ್ಮ ಪಂಚಾಯಿತಿಯಲ್ಲಿ ಕಸ ವಿಲೇವಾರಿಗೆಂದೇ ಟಿಲ್ಲರನ್ನು ಹೊಂದ್ದಿದೇವೆ’ ಎಂದು ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಕೆ.ಮಂಜುನಾಥ್ ತಿಳಿಸಿದರು.
‘
ಹಿಂದಿನ ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್.ಎ.ಉಮೇಶ್ ಅವರ ಅವಧಿಯಲ್ಲಿ ಪ್ಲಾಸ್ಟಿಕ್ ರಹಿತ ಪಂಚಾಯಿತಿಯನ್ನಾಗಿಸುವ ನಿಟ್ಟಿನಲ್ಲಿ ಪ್ಲಾಸ್ಟಿಕ್ ನಿಷೇಧಿಸಿದೆವು. ವಿದ್ಯುತ್ ಉಳಿತಾಯ ಮಾಡಲು ಮೊದಲಿದ್ದ ಟ್ಯೂಬ್‌ಲೈಟುಗಳ ಬದಲಿಗೆ ಈಗ ಸಿಎಫ್ಎಲ್ ಬಲ್ಬ್‌ಗಳನ್ನು ಅಳವಡಿಸುತ್ತಿದ್ದೇವೆ. ಮೇಲೂರಿನ ಆಸ್ಪತ್ರೆ ಆವರಣದಲ್ಲಿರುವ ಸ್ಥಳದಲ್ಲಿ ಗಿಡಗಳನ್ನು ನೆಡಲು ಯೋಜನೆ ಹಮ್ಮಿಕೊಂಡಿದ್ದೇವೆ. ನಮ್ಮ ಗ್ರಾಮದಿಂದ ಚೌಡಸಂದ್ರದವರೆಗೂ ರಸ್ತೆಬದಿ ತಂಪಾದ ನೆರಳು ನೀಡುವ ಮರಗಳಿವೆ. ಅದೇ ಮಾದರಿಯಲ್ಲಿ ಗಂಗನಹಳ್ಳಿಗೆ ಹೋಗುವ ರಸ್ತೆಯ ಎರಡು ಬದಿಗಳಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನೂ ರೂಪಿಸಿದ್ದೇವೆ’ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಸ್.ಮಂಜುನಾಥ್ ಹೇಳಿದರು.
- Advertisement -
- Advertisement -
- Advertisement -
- Advertisement -