ತಾಲ್ಲೂಕಿನ ಮೇಲೂರು ಗ್ರಾಮದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿಯನ್ನು ಶನಿವಾರ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಶ್ರೀಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ದ್ರೌಪದಮ್ಮ ಮತ್ತು ಧರ್ಮರಾಯಸ್ವಾಮಿ ದೇವಸ್ಥಾನದಿಂದ ಹೊರಟ ಶ್ರೀಕೃಷ್ಣನ ಉತ್ಸವ ಮೂರ್ತಿಯ ಮೆರವಣಿಗೆ ಭಕ್ತಿ-ಸಂಭ್ರಮಕ್ಕೆ ಸಾಕ್ಷಿಯಾಯಿತು.
ಮೆರವಣಿಗೆಯಲ್ಲಿ ಮಂಗಳ ವಾದ್ಯಗಳೊಂದಿಗೆ ತಮಟೆ ನಾದ ಜೊತೆಯಾಗಿತ್ತು. ಮೆರವಣಿಗೆಯಲ್ಲಿ ಭಾಗವಹಿಸಿದ್ದ ಶ್ರೀಕೃಷ್ಣ ವೇಷಧಾರಿ ಮುನಿರಾಜು ನಿಜವಾದ ನಾಗರಹಾವನ್ನು ಕೈಯಲ್ಲಿ ಹಿಡಿದು ಜನರ ಆಕರ್ಷಣೆಯ ಕೇಂದ್ರವಾಗಿದ್ದರು.
ಗ್ರಾಮಸ್ಥರು ಉತ್ಸವ ಮೂರ್ತಿಗೆ ಪೂಜೆಯನ್ನು ನೆರವೇರಿಸಿ ಪೂಜಾ ಕೈಂಕರ್ಯದಲ್ಲಿ ಪಾಲ್ಗೊಂಡರು. ಭಕ್ತರಿಗೆಲ್ಲಾ ದೇವಾಲಯದ ಬಳಿ ಪ್ರಸಾದವನ್ನು ವಿತರಿಸಲಾಯಿತು.
- Advertisement -
- Advertisement -
- Advertisement -
- Advertisement -