ತಾಲ್ಲೂಕಿನ ಘಟಮಾರನಹಳ್ಳಿಯ ವಾಗ್ದೇವಿ ಶೈಕ್ಷಣಿಕ ಮತ್ತು ಗ್ರಾಮಾಭಿವೃದ್ಧಿ ಸಂಘದ ವತಿಯಿಂದ ತಾಲ್ಲೂಕಿನ ವರದನಾಯಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಮತ್ತು ಲೇಖನ ಸಾಮಗ್ರಿಗಳನ್ನು ಸೋಮವಾರ ವಿತರಿಸಲಾಯಿತು.
ಮಕ್ಕಳಿಗೆ ನೋಟ್ ಪುಸ್ತಕ ಮತ್ತು ಲೇಖನ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದ ನಿವೃತ್ತ ಪ್ರೊ.ಆರ್.ವೇಣುಗೋಪಾಲ್, ‘ಲಂಡನ್ನಿನಲ್ಲಿ ನೆಲೆಸಿರುವ ಭಾರತಿ ಎನ್ನುವವರು ತಮ್ಮ ತಾಲ್ಲೂಕಿನ ಗ್ರಾಮೀಣ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುವ ಉದ್ದೇಶದಿಂದ ಈ ಕೊಡುಗೆ ನೀಡುತ್ತಿದ್ದಾರೆ. ಮಕ್ಕಳು ಚೆನ್ನಾಗಿ ವ್ಯಾಸಂಗ ಮಾಡಬೇಕು. ಮುಂದೆ ಬೆಳೆದು ಇತರರಿಗೂ ಸಹಾಯ ಮಾಡಬೇಕು’ ಎಂದು ಹೇಳಿದರು.
ನಿವೃತ್ತ ಉಪಕುಲಪತಿ ಪ್ರೊ.ನಾರಾಯಣರೆಡ್ಡಿ, ಹರಳಹಳ್ಳಿಯ ಮುನೇಗೌಡರು, ಸೊಣ್ಣೇಗೌಡರು, ಶಿಕ್ಷಕರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -