2016–17ನೇ ಸಾಲಿನಲ್ಲಿ ತಾಲ್ಲೂಕಿನ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಕಾಲೇಜುಗಳಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ಪ್ರವರ್ಗ–1, 2ಎ, 3ಎ ಮತ್ತು 3ಬಿ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು 2016–17ನೇ ಸಾಲಿಗೆ ‘ಊಟ ಮತ್ತು ವಸತಿ ಸಹಾಯ ಯೋಜನೆ (ವಿದ್ಯಾಸಿರಿ)’, ‘ಮೆಟ್ರಿಕ್ ನಂತರ ವಿದ್ಯಾರ್ಥಿವೇತನ’ ಮತ್ತು ‘ಶುಲ್ಕವಿನಾಯಿತಿ’ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ತಾಲ್ಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಡಿ.ಆರ್.ಶಂಕರ್ ತಿಳಿಸಿದ್ದಾರೆ.
ಈ ಮೇಲ್ಕಂಡ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹರಾದವರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಪ್ರವರ್ಗ–1 ರ ವಿದ್ಯಾರ್ಥಿಗಳಿಗೆ 2.5 ಲಕ್ಷ ರೂ ಮತ್ತು 2ಎ, 3ಎ ಮತ್ತು 3ಬಿ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳ ಪೋಷಕರಿಗೆ 1 ಲಕ್ಷ ರೂ ವಾರ್ಷಿಕ ಆದಾಯ ಮಿತಿ ಹೊಂದಿರಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 5 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ವಿವರಗಳಿಗೆ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಯವರನ್ನು ಸಂಪರ್ಕಿಸಬಹುದು. ಇಲಾಖೆಯ ವೆಬ್ಸೈಟ್ www.backwardclasses.kar.nic.in, ಅಥವಾ karepass.cgg.gov.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.
- Advertisement -
- Advertisement -
- Advertisement -
- Advertisement -