ಶಿಡ್ಲಘಟ್ಟದ ವಿ ಕೇರ್ಸ್ ಯು ಫೌಂಡೇಷನ್ ಸದಸ್ಯರು ಸೋಮವಾರ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದಿಬ್ಬೂರಹಳ್ಳಿ ರಸ್ತೆಯ ಮಧ್ಯದಲ್ಲಿರುವ ಸ್ಥಳದಲ್ಲಿ ಸಸಿಗಳನ್ನು ನೆಟ್ಟರು. ತಾಲ್ಲೂಕು ಪಂಚಾಯತಿ ಅಧ್ಯಕ್ಷ ಲಕ್ಷ್ಮೀನಾರಾಯಣರೆಡ್ಡಿ, ಕಾರ್ಯ ನಿರ್ವಾಹಣಾಧಿಕಾರಿ ವೆಂಕಟೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ಸಾಕ್ಷರತಾ ಅಧಿಕಾರಿ ಶ್ರೀನಿವಾಸ್ ಹಾಜರಿದ್ದರು ಶಿಡ್ಲಘಟ್ಟ ತಾಲ್ಲೂಕಿನ ಅಪ್ಪೇಗೌಡನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಶಾಲೆಯ ಹಿರಿಯ ವಿದ್ಯಾರ್ಥಿಗಳು ನಿವೃತ್ತ ಶಿಕ್ಷಕಿ ಫೈಜೂನ್ ಅವರನ್ನು ಗೌರವಿಸಿದರು. ತಾಲ್ಲೂಕು ಪಂಚಾಯತಿ ಅಧ್ಯಕ್ಷ ಲಕ್ಷ್ಮೀನಾರಾಯಣರೆಡ್ಡಿ, ಕಾರ್ಯನಿರ್ವಾಹಣಾಧಿಕಾರಿ ವೆಂಕಟೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ಗ್ರಾಮ ಪಂಚಾಯತಿ ಸದಸ್ಯ ಎ.ಎಂ.ತ್ಯಾಗರಾಜ್ ಹಾಜರಿದ್ದರು ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಗ್ರಾಮ ಪಂಚಾಯತಿ ಅಧ್ಯಕ್ಷೆ ಜಮುನಾ ಧರ್ಮೇಂದ್ರ, ಆಂಜನೇಯರೆಡ್ಡಿ, ನಿತ್ಯಾನಂದಶೆಟ್ಟಿ ಹಾಜರಿದ್ದರು. ಶಿಡ್ಲಘಟ್ಟದ ನೆಹರೂ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಲಾ ತಂಡಗಳಿಗೆ ತಾಲ್ಲೂಕು ಕ.ಸಾ.ಪ ವತಿಯಿಂದ ಪುಸ್ತಕ ಬಹುಮಾನ ಮತ್ತು ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ಶಾಸಕ ಎಂ.ರಾಜಣ್ಣ, ತಾಲ್ಲೂಕು ಕ.ಸಾ.ಪ ಅಧ್ಯಕ್ಷ ಬಿ.ಆರ್.ಅನಂತಕೃಷ್ಣ, ತಾಲ್ಲೂಕು ಪಂಚಾಯತಿ ಅಧ್ಯಕ್ಷ ಲಕ್ಷ್ಮೀನಾರಾಯಣರೆಡ್ಡಿ ಹಾಜರಿದ್ದರು. ಶಿಡ್ಲಘಟ್ಟ ತಾಲ್ಲೂಕಿನ ತಾತಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಶಾಲೆಯ ಅಭಿವೃದ್ಧಿಗೆ ಪೂರಕವಾಗಿ ತೊಡಗಿಸಿಕೊಳ್ಳುವ ಉದ್ದೇಶದಿಂದ ಸ್ಫೂರ್ತಿ ಯುಕರ ಬಳಗದ ಸ್ಥಾಪನೆಯಾಯಿತು. ಗ್ರಾಮಸ್ಥರು ಶಾಲೆಗೆ ಧ್ವನಿವರ್ಧಕವನ್ನು ನೀಡಿದರು.
ಶಿಡ್ಲಘಟ್ಟ ತಾಲ್ಲೂಕಿನ ಸಾದಲಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಗೆಳೆಯರ ಬಳಗ, ಆಟೋ ಮತ್ತು ಟಾಟಾ ಮ್ಯಾಜಿಕ್ ಚಾಲಕರು ಹಾಗೂ ಮಾಲೀಕರು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದರು. ಸಾದಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಗೋವಿಂದರಾಜು, ಸದಸ್ಯರಾದ ಎಸ್.ಆರ್.ನಾರಾಯಣಪ್ಪ, ಎಸ್.ಎಂ.ನಾರಾಯಣಪ್ಪ, ದೊಡ್ಡನರಸಿಂಹಪ್ಪ, ನರಸಿಂಹಪ್ಪ, ಶಿವಪ್ಪ ಹಾಜರಿದ್ದರು
ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರು ಸಮೀಪದ ಸಾಯಿನಾಥ ಜ್ಞಾನಮಂದಿರದಲ್ಲಿ ಸೋಮವಾರ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ದೇವರಿಗೆ ತ್ರಿವರ್ಣದ ಅಲಂಕಾರವನ್ನು ಮಾಡಿದ್ದು ವಿಶೇಷವಾಗಿತ್ತು.