Home News ಸಮಾಜಕ್ಕೆ ನಿಮ್ಮ ಬುದ್ಧಿ, ಜ್ಞಾನ ಸಮರ್ಪಿತವಾಗಲಿ

ಸಮಾಜಕ್ಕೆ ನಿಮ್ಮ ಬುದ್ಧಿ, ಜ್ಞಾನ ಸಮರ್ಪಿತವಾಗಲಿ

0

ಕಸಾಪ ತಾಲ್ಲೂಕು ಘಟಕದ ವತಿಯಿಂದ ‘ಸಾಧಕರ ಸಾಧನೆ, ವಿದ್ಯಾರ್ಥಿಗಳಿಗೆ ಪ್ರೇರಣೆ’ ಕಾರ್ಯಕ್ರಮ
‘ಪ್ರಶ್ನಿಸದೆ ನಂಬಬೇಡ’ ಎಂಬ ಎಚ್.ನರಸಿಂಹಯ್ಯನವರ ಮಾತು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು. ಹೊಸತನವಾಗಿ ಯೋಚಿಸಿ, ಹೊಸತನ್ನು ಕಂಡು ಹಿಡಿಯುವ ಬಗ್ಗೆ ನಿಮ್ಮ ಆಲೋಚನೆಗಳು ಸಾಗಲಿ, ಸಮಾಜಕ್ಕೆ ನಿಮ್ಮ ಬುದ್ಧಿ, ಜ್ಞಾನ ಸಮರ್ಪಿತವಾಗಲಿ ಎಂದು ಇಸ್ರೋ ಹಿರಿಯ ವಿಜ್ಞಾನಿ ಹಾಗೂ ಜಿಯೋ ಸ್ಯಾಟ್‌ ವಿಭಾಗದ ಮುಖ್ಯಸ್ಥ ಹಿರಿಯಣ್ಣ ತಿಳಿಸಿದರು.
ತಾಲ್ಲೂಕಿನ ನಡಿಪಿನಾಯಕನಹಳ್ಳಿಯ ನವೋದಯ ವಿದ್ಯಾಲಯ ವಸತಿ ಪ್ರೌಢಶಾಲೆ ಮತ್ತು ಕಪಿಲಮ್ಮ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಕಸಾಪ ತಾಲ್ಲೂಕು ಘಟಕದ ವತಿಯಿಂದ ‘ಸಾಧಕರ ಸಾಧನೆ, ವಿದ್ಯಾರ್ಥಿಗಳಿಗೆ ಪ್ರೇರಣೆ’ ಎಂಬ ಕಾರ್ಯಕ್ರಮದಡಿಯಲ್ಲಿ ಭಾನುವಾರ ಏರ್ಪಡಿಸಿದ್ದ ವಿಜ್ಞಾನ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರತಿಯೊಬ್ಬರೂ ಒಂದೊಂದು ವೃತ್ತಿಯನ್ನು ಕೈಗೊಳ್ಳಬೇಕು. ಆದರೆ ಅದು ಕೇವಲ ಹಣ ಸಂಪಾದಿಸಲು ಮಾತ್ರ ಆಗಬಾರದು. ಸಮಾಜಕ್ಕೆ ನಮ್ಮ ಕಾಣ್ಕೆಯಾಗಿ ನಮ್ಮ ದುಡಿಮೆಯಿರಬೇಕು. ನಮ್ಮಿಂದ ಸಮಾಜದಲ್ಲಿ ಸ್ವಲ್ಪ ಮಟ್ಟಿಗಿನ ಬದಲಾವಣೆಯಾದರೂ ಬದುಕು ಸಾರ್ಥಕತೆ ಕಾಣುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಪಠ್ಯದೊಂದಿಗೆ ತಿಂಗಳಿಗೊಂದು ಹೊಸ ಪುಸ್ತಕ ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು. ಪ್ರತಿದಿನ ಒಂದು ಗಂಟೆ ತಡವಾಗಿ ಮಲಗಿ. ಆ ಸಮಯವನ್ನು ಓದಿಗೆ ಮೀಸಲಿಡಿ ಎಂದು ಸಲಹೆ ನೀಡಿದರು.
ಭಾರತೀಯ ಬಾಹ್ಯಾಹಾಶ ವಿಜ್ಞಾನ ನಡೆದು ಬಂದ ದಾರಿ, ಉಪಗ್ರಹ ಉಡ್ಡಯನ ಕಾರ್ಯದ ಬಗ್ಗೆ, ಇಸ್ರೋ ಸಂಸ್ಥೆ ಹಾಗೂ ಅದರ ಕಚೇರಿಗಳ ಕಾರ್ಯಗಳ ಕುರಿತು ಸ್ಲೈಡ್‌ ಷೋ ಮೂಲಕ ಚಿತ್ರಗಳನ್ನು ತೋರಿಸುತ್ತಾ ವಿವರಿಸಿದರು. ಪಿಯುಸಿ ವಿದ್ಯಾರ್ಥಿಗಳು ಇಸ್ರೋ ಸಂಸ್ಥೆ ಸೇರಲು ಪ್ರೇರೇಪಿಸಿ ಅವರು ತೆಗೆದುಕೊಳ್ಳಬೇಕಾದ ಪರೀಕ್ಷೆಗಳ ಬಗ್ಗೆ ತಿಳಿಸಿದರು.

ಶಿಡ್ಲಘಟ್ಟ ತಾಲ್ಲೂಕಿನ ನಡಿಪಿನಾಯಕನಹಳ್ಳಿಯ ನವೋದಯ ವಿದ್ಯಾಲಯ ವಸತಿ ಪ್ರೌಢಶಾಲೆ ಮತ್ತು ಕಪಿಲಮ್ಮ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಕಸಾಪ ತಾಲ್ಲೂಕು ಘಟಕದ ವತಿಯಿಂದ ಭಾನುವಾರ ಏರ್ಪಡಿಸಿದ್ದ ವಿಜ್ಞಾನ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಕರ್ನಾಟಕ ಏಕೀಕರಣದ ಬಗ್ಗೆ ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಕಸಾಪ ತಾಲ್ಲೂಕು ಘಟಕದಿಂದ ಪ್ರಶಸ್ತಿ ಪತ್ರ ಮತ್ತು ಪುಸ್ತಕಗಳನ್ನು ಬಹುಮಾನವಾಗಿ ನೀಡಲಾಯಿತು.
ಶಿಡ್ಲಘಟ್ಟ ತಾಲ್ಲೂಕಿನ ನಡಿಪಿನಾಯಕನಹಳ್ಳಿಯ ನವೋದಯ ವಿದ್ಯಾಲಯ ವಸತಿ ಪ್ರೌಢಶಾಲೆ ಮತ್ತು ಕಪಿಲಮ್ಮ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಕಸಾಪ ತಾಲ್ಲೂಕು ಘಟಕದ ವತಿಯಿಂದ ಭಾನುವಾರ ಏರ್ಪಡಿಸಿದ್ದ ವಿಜ್ಞಾನ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಕರ್ನಾಟಕ ಏಕೀಕರಣದ ಬಗ್ಗೆ ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಕಸಾಪ ತಾಲ್ಲೂಕು ಘಟಕದಿಂದ ಪ್ರಶಸ್ತಿ ಪತ್ರ ಮತ್ತು ಪುಸ್ತಕಗಳನ್ನು ಬಹುಮಾನವಾಗಿ ನೀಡಲಾಯಿತು.

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ವಿಜ್ಞಾನಿ ಹಿರಿಯಣ್ಣ, ದೆವ್ವ, ಭೂತ, ರಾಕೆಟ್‌ ಇಂಧನ, ಅನ್ಯಗ್ರಹ ಜೀವಿಗಳು, ಭೂಮಿಯ ಸೃಷ್ಠಿ, ನಕ್ಷತ್ರಗಳು, ಉಪಗ್ರಹ ವಾಹನ ಮೊದಲಾದ ವಿಷಯಗಳ ಬಗ್ಗೆ ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು. ಪ್ರಶ್ನೆಗಳನ್ನು ಕೇಳಿದ ವಿದ್ಯಾರ್ಥಿಗಳಿಗೆ ಕಸಾಪ ತಾಲ್ಲೂಕು ಘಟಕದ ವತಿಯಿಂದ ಪುಸ್ತಕವನ್ನು ನೀಡಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಎಂ.ರಾಜಣ್ಣ, ಶಾಲಾ ಕಾಲೇಜುಗಳಲ್ಲಿ ಸಾಧಕರನ್ನು ಕರೆಸಿ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುವುದು, ಅವರಿಗೆ ವಿವಿಧ ಕ್ಷೇತ್ರಗಳ ಬಗ್ಗೆ ತಿಳಿಸಿಕೊಡುವುದು ಉತ್ತಮ ಕಾರ್ಯ. ಈ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಕಸಾಪ ತಾಲ್ಲೂಕು ಘಟಕ ಮತ್ತು ಸಹಕಾರ ನೀಡಿರುವ ಶಿಕ್ಷಣ ಸಂಸ್ಥೆಯವರು ಮಾದರಿಯಾಗಿದ್ದಾರೆ ಎಂದರು.
ನವೋದಯ ವಿದ್ಯಾಲಯ ವಸತಿ ಪ್ರೌಢಶಾಲೆ ಮತ್ತು ಕಪಿಲಮ್ಮ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಕರ್ನಾಟಕ ಏಕೀಕರಣದ ಬಗ್ಗೆ ನಡೆಸಿದ ಪ್ರಬಂಧ ಸ್ಪರ್ಧೆಯನ್ನು ನಡೆಸಿದ್ದು, ವಿಜೇತರಿಗೆ ಕಸಾಪ ತಾಲ್ಲೂಕು ಘಟಕದಿಂದ ಪ್ರಶಸ್ತಿ ಪತ್ರ ಮತ್ತು ಪುಸ್ತಕಗಳನ್ನು ಬಹುಮಾನವಾಗಿ ನೀಡಲಾಯಿತು.
ಬೀ ಬ್ರೈನಿ ಎಡುಕೇಷನಲ್‌ ಫೌಂಡೇಷನ್‌ ಸಂಸ್ಥೆಯ ಮೇಖಲಾ ಅವರು ಯಶಸ್ಸಿನೆಡೆಗೆ ಪಯಣ, ಗೆಲುವಿನ ಗುಟ್ಟು ಎಂಬ ವಿಷಯದ ಬಗ್ಗೆ ವೀಡಿಯೋ ತೋರಿಸಿವ ಮೂಲಕ ವಿದ್ಯಾರ್ಥಿಗಳಿಗೆ ಸಾಧನೆಯ ಹಾದಿಯ ಪರಿಚಯ ಮಾಡಿಕೊಟ್ಟರು.
ಶಾಲಾ ಕಾಲೇಜಿನ ವಿದ್ಯಾರ್ಥಿಗಳು ವಿಜ್ಞಾನ ವಸ್ತುಪ್ರದರ್ಶನವನ್ನು ಏರ್ಪಡಿಸಿದ್ದು, ಸುತ್ತಮುತ್ತಲಿನ ಶಾಲಾ ವಿದ್ಯಾರ್ಥಿಗಳು ಆಗಮಿಸಿ ವೀಕ್ಷಿಸಿದರು. ಜಾನಪದ ಗಾಯಕ ದೇವರಮಳ್ಳೂರು ಮಹೇಶ್‌ ಜಾನಪದ ಗಾಯನವನ್ನು ನಡೆಸಿಕೊಟ್ಟರು.
ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಆರ್‌.ಅನಂತಕೃಷ್ಣ, ಮಾಜಿ ಜಿಲ್ಲಾ ಅಧ್ಯಕ್ಷ ಹನುಮಂತರಾವ್‌, ಮಾಜಿ ಗೌರವ ಕಾರ್ಯದರ್ಶಿ ಅಮೃತಕುಮಾರ್‌, ಉಪಾಧ್ಯಕ್ಷ ಸಿ.ಪಿ.ಈ.ಕರಗಪ್ಪ, ಕಾರ್ಯದರ್ಶಿ ಎ.ಎಂ.ತ್ಯಾಗರಾಜ್‌, ಡಾ.ಡಿ.ಟಿ.ಸತ್ಯನಾರಾಯಣರಾವ್‌, ಕಪಿಲಮ್ಮ ಕಾಲೇಜಿನ ಪ್ರಾಂಶುಪಾಲ ಎನ್‌.ಕೆ.ಸುದರ್ಶನ್‌, ಪ್ರೌಢಶಾಲೆಯ ಮುಖ್ಯಶಿಕ್ಷಕ ಸತ್ಯನಾರಾಯಣ್‌, ಕಾಚಹಳ್ಳಿ ದೇವರಾಜ್‌, ಸ್ನೇಕ್‌ ನಾಗರಾಜ್‌ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ವಿದ್ಯಾರ್ಥಿಗಳಿಗೆ ಇಸ್ರೋ ಭೇಟಿ ಕಲ್ಪಿಸಿದ ತಾಲ್ಲೂಕು ಕಸಾಪ: ಶಿಡ್ಲಘಟ್ಟ ತಾಲ್ಲೂಕಿನ ನಡಿಪಿನಾಯಕನಹಳ್ಳಿಯ ಕಪಿಲಮ್ಮ ಕಾಲೇಜಿನ 60 ಮಂದಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳನ್ನು ಬೆಂಗಳೂರಿನ ಇಸ್ರೋ ಸಂಸ್ಥೆಗೆ ಕರೆದೊಯ್ಯಲು ಕಸಾಪ ತಾಲ್ಲೂಕು ಘಟಕದಿಂದ ಇಸ್ರೋ ಹಿರಿಯ ವಿಜ್ಞಾನಿ ಹಾಗೂ ಜಿಯೋ ಸ್ಯಾಟ್‌ ವಿಭಾಗದ ಮುಖ್ಯಸ್ಥ ಹಿರಿಯಣ್ಣ ಅವರಿಗೆ ಮನವಿ ಸಲ್ಲಿಸಲಾಯಿತು. ವಿದ್ಯಾರ್ಥಿಗಳಿಗೆ ಇಸ್ರೋ ಸಂಸ್ಥೆಯನ್ನು ತೋರಿಸಿ ಪರಿಚಯಿಸುವುದಾಗಿ ವಿಜ್ಞಾನಿ ಹಿರಿಯಣ್ಣ ಭರವಸೆ ನೀಡಿದರು.