ಶೈಕ್ಷಣಿಕ ಮತ್ತು ಆರ್ಥಿಕವಾಗಿ ಜನಾಂಗದ ಅಭಿವೃದ್ಧಿಗೆ ಸಮುದಾಯದ ಮುಖಂಡರು ಶ್ರಮಿಸಬೇಕು. ಸರ್ಕಾರದ ಯೋಜನೆಗಳನ್ನು ಸಮುದಾಯದ ಬಡವರಿಗೆ, ಹಿಂದುಳಿದವರಿಗೆ ತಲುಪಿಸುವ ಕಾರ್ಯ ಮಾಡಬೇಕು ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ನಡೆದ ಮೊದಲನೇ ವರ್ಷದ ವಿಶ್ವಕರ್ಮ ಜಯಂತಿ ಮಹೋತ್ಸವವನ್ನು ಶಾಸಕ ಎಂ.ರಾಜಣ್ಣ ಉದ್ಘಾಟಿಸಿ ಮಾತನಾಡಿದರು.
ವಿಶೇಷ ಕುಸುರಿ ಕೌಶಲ ಹೊಂದಿರುವ ವಿಶ್ವಕರ್ಮ ಜನಾಂಗವು ವಿಶ್ವ ಮಾನ್ಯತೆ ಪಡೆದಿದೆ. ವಿಶ್ವಕರ್ಮ ಸಮುದಾಯವು ಚಿನ್ನಬೆಳ್ಳಿ ಕೆಲಸ, ಮರಗೆಲಸ, ಕಬ್ಬಿಣದ ಕೆಲಸ, ಶಿಲ್ಪಕಲೆ ಸೇರಿದಂತೆ ಪಂಚ ಕಸುಬುಗಳನ್ನು ಮಾಡುವ ಮೂಲಕ ಸಮಾಜಕ್ಕೆ ಅಪಾರ ಕೊಡುಗೆಯನ್ನು ನೀಡುತ್ತಿದ್ದಾರೆ. ಅನೇಕರು ಕುಲ ಕಸುಬಿನಿಂದ ದೂರವುಳಿಯುತ್ತಿದ್ದಾರೆ. ಆಧುನಿಕ ಯುಗದಲ್ಲಿ ತಾಂತ್ರಿಕತೆಯನ್ನು ಪರಿಚಯಿಸಿ ಯುವಕರಿಗೆ ವೃತ್ತಿ ಕೌಶಲ್ಯವನ್ನು ಕಲಿಸುವ ಮೂಲಕ ವೃತ್ತಿಪರರನ್ನು ಸೃಷ್ಠಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ವಿಶ್ವಕರ್ಮರ ಭಾವಚಿತ್ರವನ್ನು ಗಣ್ಯರು ಅನಾವರಣಗೊಳಿಸಿ ಕಾರ್ಯಕ್ರಮದಲ್ಲಿ ಹಾಜರಿದ್ದವರಿಗೆ ವಿತರಿಸಲಾಯಿತು. ಪಿಟೀಲು ವಿದ್ವಾನ್ ಹೊಸಪೇಟೆ ನಾರಾಯಣಾಚಾರ್ ಅವರನ್ನು ಸನ್ಮಾನಿಸಲಾಯಿತು.
ತಹಶೀಲ್ದಾರ್ ಮನೋರಮಾ, ನಗರಸಭೆ ಅಧ್ಯಕ್ಷ ಅಪ್ಸರ್ ಪಾಷ, ಉಪಾಧ್ಯಕ್ಷೆ ಪ್ರಭಾವತಿ ಸುರೇಶ್, ತಾಲ್ಲೂಕು ಪಂಚಾಯತಿ ಉಪಾಧ್ಯಕ್ಷ ನರಸಿಂಹಯ್ಯ, ಮಂಜುನಾಥ, ಪಿ.ವಿ.ನಾಗರಾಜ್, ಕಾಳಿಕಾಂಬ ಕಮಠೇಶ್ವರಸ್ವಾಮಿ ಸೇವಾ ಸಮಿತಿ ಬಿ.ಕೆ.ಮುನಿರತ್ನಾಚಾರಿ, ಈಶ್ವರಾಚಾರಿ, ಕೆ.ಎನ್.ಜನಾರ್ಧನಮೂರ್ತಿ, ಅಮರನಾರಾಯಣಾಚಾರಿ, ಸುಂದರಾಚಾರಿ ಮತ್ತಿತರರು ಹಾಜರಿದ್ದರು.
- Advertisement -
- Advertisement -
- Advertisement -
- Advertisement -