ಬೆಳಗಾವಿ ಅಧಿವೇಶನದಲ್ಲಿ ಬರ ನಿರ್ವಹಣೆಗೆ ವಿಶೇಷ ಪ್ಯಾಕೇಜ್ ಘೋಷಣೆ, ಬೆಳೆ ನಷ್ಟ ಅನುಭವಿಸಿದ ರೈತರ ಪ್ರತಿ ಎಕರೆಗೆ ೨೫ ಸಾವಿರ ರೂ ಪರಿಹಾರ, ರೈತರ ಸಾಲ ಮನ್ನಾ ಸೇರಿದಂತೆ ಹಲವಾರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜಿಲ್ಲಾಡಳಿತ ಭವನದ ಎದುರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಐದನೇ ದಿನಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ, ತಾಲ್ಲೂಕಿನ ಹೆಸಿರು ಸೇನೆ ಸಂಘಟನೆಯಿಂದ ಗುರುವಾರ ಬೆಂಬಲ ನೀಡಲು ಬೈಕ್ ರ್ಯಾರಲಿ ಮೂಲಕ ರೈತರು ತೆರಳಿದರು.
ರೈತರ ಹಲವು ಬೇಡಿಕೆಗಳ ಈಡೇರಿಕೆ ಆಗ್ರಹಿಸಿ, ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸಂಘಗಳು ಚಿಕ್ಕಬಳ್ಳಾಪುರದಲ್ಲಿ ಇರುವ ಜಿಲ್ಲಾಡಳಿತ ಭವನದ ಎದುರು ಧರಣಿಗೆ ಬೆಂಬಲ ವ್ಯಕ್ತಪಡಿಸುವ ಸಲುವಾಗಿ ನಾವು ಬೈಕ್ ಮೂಲಕ ತೆರಳಿ ಬೆಂಬಲವನ್ನು ವ್ಯಕ್ತಪಡಿಸುತ್ತೇವೆ ಎಂದು ಹಸಿರು ಸೇನೆಯ ತಾಲ್ಲೂಕು ಅಧ್ಯಕ್ಷ ರವಿ ಪ್ರಕಾಶ್ ತಿಳಿಸಿದರು.
ಬರಕ್ಕೆ ತುತ್ತಾಗಿ ಕಂಗಾಲಾಗಿರುವ ರೈತರು ಹಿತದೃಷ್ಠಿಯಿಂದ ವಿಶೇಷ ಪ್ಯಾಕೇಜ್‌ನ ಅವಶ್ಯಕತೆಯಿದ್ದು, ಬೆಳಗಾವಿ ಅಧಿವೇಶನದಲ್ಲಿ ರೈತರ ಬೆಳೆ ನಷ್ಟಕ್ಕೆ ಎಕರೆಗೆ ೨೫ ಸಾವಿರ ರೂಗಳ ಪರಿಹಾರ ಒದಗಿರುವ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಒತ್ತಾಯಿಸಿದರು.
ಬೆಳೆ ನಷ್ಟ ಅನುಭವಿಸಿದ ರೈತರ ಪರಿಹಾರ ಹಾಗೂ ಬ್ಯಾಂಕ್‌ಗಳಲ್ಲಿನ ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ವಿದ್ಯುತ್ ಸಮಸ್ಯೆ ನೀಗಿಸಬೇಕು. ಬಯಲು ಸೀಮೆಗೆ ಶಾಶ್ವತ ನೀರಾವರಿ ಯೋಜನೆ ಜಾರಿಯಾಗಬೇಕು, ಹಾಲು, ರೇಷ್ಮೆಗೆ ಪರಿಷ್ಕೃತ ಬೆಲೆ ಘೋಷಿಸಬೇಕು ಹಾಗೂ ಇನ್ನೂ ಹಲವಾರು ಬೇಡಿಕೆಗಳ ಕಾರ್ಯ ರೂಪಕ್ಕೆ ತರಬೇಕೆಂದು ಒತ್ತಾಯಿಸಿರು.
ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜೆ.ಎಸ್.ವೆಂಟಸ್ವಾಮಿ, ತಾಲ್ಲೂಕು ಕಾರ್ಯಾದರ್ಶಿ ಪ್ರತೀಶ್, ಕೆಂಪಣ್ಣ, ಮಾರುತಿ, ಮುರಳಿ ಮತ್ತಿತರರು ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -