ಹಿಂದೂ ಜಾಗರಣಾ ವೇದಿಕೆಯಿಂದ ನಗರದ ವಾಸವಿ ಶಾಲೆಯ ಆವರಣದಲ್ಲಿ ಭಾನುವಾರ ನಡೆಯಲಿರುವ ಬೃಹತ್ ಹಿಂದೂ ಸಮಾಜೋತ್ಸವ ಕಾರ್ಯಕ್ರಮದ ಪೂರ್ವಭಾವಿಯಾಗಿ ಶನಿವಾರ ಶಿಡ್ಲಘಟ್ಟದ ಪ್ರಮುಖ ಬೀದಿಗಳಲ್ಲಿ ಹಿಂದೂ ಜಾಗರಣಾ ವೇದಿಕೆ ಸದಸ್ಯರು ಬೈಕ್ ರ್ಯಾಾಲಿ ನಡೆಸಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ಕೋರಿದರು.
ನಗರದ ಅಶೋಕ ರಸ್ತೆಯಲ್ಲಿರುವ ಬಸವೇಶ್ವರ ದೇವಾಲಯದಿಂದ ಮೆರವಣಿಗೆಗೆ ಚಾಲನೆ ನೀಡಿದ ಹಿಂದೂ ಜಾಗರಣಾ ವೇದಿಕೆಯ ಪದಾಧಿಕಾರಿಗಳು, ಬೈಕ್‌ಗಳು ಹಾಗೂ ಆಟೋಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಈ ಸಂದರ್ಭದಲ್ಲಿ ಭಾರತ ಮಾತೆಗೆ ಜೈಕಾರಗಳನ್ನು ಹಾಕಿದರು.
ಭಾನುವಾರ ಮಧ್ಯಾಹ್ನ 3 ಗಂಟೆಗೆ ಬೃಹತ್ ಶೋಭಾ ಯಾತ್ರೆಯನ್ನು ಆಯೋಜಿಸಿದ್ದು, ಅಶೋಕ ರಸ್ತೆಯ ಬಸವೇಶ್ವರಸ್ವಾಮಿ ದೇವಸ್ಥಾನದಿಂದ ಹೊರಟು ಪ್ರಮುಖ ಬೀದಿಗಳಲ್ಲಿ ಸಂಚರಿಸಿ ವಾಸವಿ ಶಾಲೆಯ ಬಳಿ ಸೇರುವುದಾಗಿ ತಿಳಿಸಿದರು. ಬೃಹತ್ ಹಿಂದೂ ಸಮಾಜೋತ್ಸವದಲ್ಲಿ ರಾಮಕೃಷ್ಣ ಆಶ್ರಮದ ಪೂರ್ಣಾನಂದ ಸ್ವಾಮೀಜಿ ಆಶೀರ್ವಚನವನ್ನು ನೀಡಲಿದ್ದು, ದಿಕ್ಸೂಚಿ ಭಾಷಣವನ್ನು ಹಿಂದೂ ಜಾಗರಣಾ ವೇದಿಕೆ ಕ್ಷೇತ್ರೀಯ ಸಂಘಟನಾ ಮಂತ್ರಿ ಜಗದೀಶ್ ಕಾರಂತ್ ಮಾಡಲಿದ್ದಾರೆ.
- Advertisement -
- Advertisement -
- Advertisement -
- Advertisement -