ತಾಲ್ಲೂಕಿನ ಹಿರಿಯ ಕಾಂಗ್ರೆಸ್ ಮುಖಂಡರಲ್ಲೊಬ್ಬರಾದ ಹಂಡಿಗನಾಳದ ಬಿ.ಕೆ.ನಾರಾಯಣಸ್ವಾಮಿ(94) ತಮ್ಮ ಸ್ವಗೃಹದಲ್ಲಿ ಶನಿವಾರ ನಿಧನರಾಗಿದ್ದಾರೆ. ವಯೋಸಹಜ ಕಾರಣದಿಂದ ಅವರು ಅಸ್ವಸ್ಥರಾಗಿದ್ದರು. ರಾವ್ ಬಹಾದ್ದೂರ್ ಬಿ.ಕೆ.ನಾರಾಯಣಸ್ವಾಮಿ ಅವರು ಮಾಜಿ ತಾಲ್ಲೂಕು ಸಮಿತಿ ಸದಸ್ಯರು, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರೂ ಆಗಿದ್ದು, ತಾಲ್ಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಬೆಳವಣಿಗೆಗೆ ಅಪಾರವಾಗಿ ಶ್ರಮಿಸಿದ್ದರು.
ಅವರು ನಾಲ್ವರು ಗಂಡು ಮಕ್ಕಳು, ಮೂವರು ಹೆಣ್ಣು ಮಕ್ಕಳು, 26 ಮಂದಿ ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಕೆ.ಪಿ.ಸಿ.ಸಿ ಉಪಾಧ್ಯಕ್ಷ ವಿ.ಮುನಿಯಪ್ಪ ಸೇರಿದಂತೆ ತಾಲ್ಲೂಕಿನ ಕಾಂಗ್ರೆಸ್ ಮುಖಂಡರು ಭೇಟಿ ನೀಡಿ ಮೃತ ಆತ್ಮಕ್ಕೆ ಶಾಂತಿಯನ್ನು ಕೋರಿದರು.
ಮೃತರ ಅಂತ್ಯಕ್ರಿಯೆಯನ್ನು ಅವರ ತೋಟದಲ್ಲಿರುವ ಸಂಪಿಗೆ ವನದಲ್ಲಿ ಭಾನುವಾರ ನೆರವೇರಿಸಲಾಗುವುದೆಂದು ಅವರ ಸಂಬಂಧಿಕರು ತಿಳಿಸಿದ್ದಾರೆ.