ಶಿಡ್ಲಘಟ್ಟ ನಗರದ ಪ್ರವಾಸಿಮಂದಿರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಎಬಿಡಿ ಟ್ರಸ್ಟ್ ನ ಸಂಸ್ಥಾಪಕ ರಾಜೀವ್ ಗೌಡ ಮಾತನಾಡಿದರು.
ನಾವು ಸಮಾಜ ಸೇವಾ ಕಾರ್ಯಗಳನ್ನು ಮಾಡಿಕೊಂಡು ಹೋಗುವಾಗ ಸಾಕಷ್ಟು ಮಂದಿ ಬಂದು ಕೋವಿಡ್ ಗೆ ತುತ್ತಾಗಿ ಸಂಕಷ್ಟ ಎದುರಿಸುತ್ತಿರುವುದಾಗಿ ಹೇಳಿಕೊಂಡಾಗ ಅಂತಹವರ ನೆರವಿಗೆ ಧಾವಿಸಬೇಕಾಗಿರುವುದು ನಮ್ಮ ಧರ್ಮ ಎನಿಸಿ ಅವರಿಗೆ ಸಹಾಯ ಮಾಡಲು ಮುಂದಾಗಿದ್ದೇವೆ.
ತಾಲ್ಲೂಕಿನಲ್ಲಿ ಕೋವಿಡ್ ಸಂಕಷ್ಟದಿಂದ ಮೃತಪಟ್ಟಿರುವ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವುದರ ಜೊತೆಗೆ ನಗರದ ಪ್ರತಿಯೊಂದು ಕುಟುಂಬಗಳಿಗೂ ದಿನಸಿ ಕಿಟ್ ವಿತರಣೆ ಮಾಡುವಂತಹ ಕಾರ್ಯಕ್ರಮವನ್ನು ಮುನ್ನಡೆಸಿಕೊಂಡು ಹೋಗಲಾಗುತ್ತಿದೆ ಎಂದು ಹೇಳಿದರು.
ತಾಲ್ಲೂಕು ಅಭಿವೃದ್ಧಿಯಿಂದ ಸಾಕಷ್ಟು ಹಿಂದುಳಿದಿದೆ. ಕುಡಿಯುವ ನೀರಿನ ಸಮಸ್ಯೆಯಿಂದ ಹಿಡಿದು, ಸಾಕಷ್ಟು ಸಮಸ್ಯೆಗಳಿಗೆ ಪರಿಹಾರವನ್ನು ಕಂಡು ಹಿಡಿಯಬೇಕಾಗಿರುವ ನಿಟ್ಟಿನಲ್ಲಿ ನಮ್ಮ ಟ್ರಸ್ಟ್ ನ ವತಿಯಿಂದ ಸಾಮಾಜಿಕ ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡು ಕೆಲಸ ಮಾಡುತ್ತಿದ್ದೇವೆ.
ಇತ್ತಿಚೆಗೆ ರಾಸುಗಳಲ್ಲಿ ಕಾಲುಬಾಯಿ ಜ್ವರದ ಸಮಸ್ಯೆಗಳು ಕಾಣಿಸಿಕೊಂಡು ರಾಸುಗಳನ್ನು ಕಳೆದುಕೊಂಡಿರುವವರ ಕುಟುಂಬಗಳಿಗೂ ನೆರವಾಗುವ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದೇವೆ. ತಾಲ್ಲೂಕಿನಲ್ಲಿ 50 ಸಾವಿರ ಕಿಟ್ ಗಳನ್ನು ಮಾಡಿಸಿ ಹಂಚಿಕೆ ಮಾಡುವಂತಹ ಕೆಲಸ ಮಾಡುತ್ತಿದ್ದೇವೆ. ದೇವಾಲಯಗಳ ಜೀರ್ಣೋದ್ಧಾರ, ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದೇವೆ. ಕ್ಷೇತ್ರದ ಜನರು ನಮ್ಮ ಸೇವೆಯನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ವೈಧ್ಯಕೀಯ ಸಮಸ್ಯೆ ಇರುವವರು, ಆಸ್ಪತ್ರೆಗಳಲ್ಲಿ ಬಿಲ್ ಕಟ್ಟಲಿಕ್ಕೆ ಸಾಧ್ಯವಾಗದವರು, ನಮ್ಮನ್ನು ಸಂಪರ್ಕ ಮಾಡಿದರೆ ಸಹಾಯ ಮಾಡಲಿದ್ದೇವೆ. ಆಂಬುಲೇನ್ಸ್ ಗಳನ್ನು ಜನರ ಉಪಯೋಗಕ್ಕೆ ಕೊಡುಗೆಯಾಗಿ ಕೊಡಲಿಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ. ತಲಕಾಯಲಬೆಟ್ಟ, ಜಂಗಮಕೋಟೆ ಹಾಗೂ ಸುಗಟೂರಿನಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದು. ಕೋವಿಡ್ ತುರ್ತು ಮುಗಿದ ಕೂಡಲೇ ಕಾಮಗಾರಿ ಆರಂಭಿಸಲಿದ್ದೇವೆ ಎಂದರು. ಈ ಸಂದರ್ಭದಲ್ಲಿ ಎಬಿಡಿ ಟ್ರಸ್ಟ್ ಸದಸ್ಯ ಶ್ರೀನಿವಾಸ್ ಬಾಬು ಉಪಸ್ಥಿತರಿದ್ದರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi