ಶಿಡ್ಲಘಟ್ಟ ತಾಲ್ಲೂಕಿನ ಕೃಷಿ ಇಲಾಖೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಕೃಷಿ ಸಂಸ್ಕರಣೆ ಯೋಜನೆಯಡಿಯಲ್ಲಿ ಸಿಗುವಂತಹ ಟಾರ್ಪಲಿನ್ (8*6ಮೀ) ಸೌಲಭ್ಯವನ್ನು ಪಡೆಯಬಹುದೆಂದು ಕೃಷಿ ಇಲಾಖೆಯ ನಿರ್ದೇಶಕ ಡಾ.ಎಸ್.ವಿ. ಮಂಜುನಾಥ್ ತಿಳಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು ಅರ್ಜಿ ಸಲ್ಲಿಸುವ ರೈತರು ಅರ್ಜಿ ನಮೂನೆಯೊಂದಿಗೆ ಆಧಾರ್ ಕಾರ್ಡ್, ಬ್ಯಾಂಕ್ ಸ್ ಪುಸ್ತಕ, ಜಾತಿ ಪ್ರಮಾಣ ಪತ್ರ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮಾತ್ರ), ಪಹಣಿ ದಾಖಲೆಗಳನ್ನು ಸಂಬಂಧಪಟ್ಟ ಹೋಬಳಿ ರೈತ ಸಂಪರ್ಕ ಕೇಂದ್ರದಲ್ಲಿ ಮೇ 12 ರೊಳಗೆ ಸಲ್ಲಿಸಲು ಮನವಿ ಮಾಡಿದ್ದಾರೆ.
ರೈತರಿಗೆ 2022-23 ನೇ ಸಾಲಿನಲ್ಲಿ ಕೃಷಿ ಇಲಾಖೆಯಿಂದ ಅನುಷ್ಠಾನ ಮಾಡಲಾಗುವ ಕೃಷಿ ಯಾಂತ್ರೀಕರಣ, ತುಂತುರು ನೀರಾವರಿ ಸೌಲಭ್ಯವನ್ನು ಪಡೆಯಲು ಸಂಬಂಧಪಟ್ಟ ಹೋಬಳಿ ರೈತ ಸಂಪರ್ಕ ಕೇಂದ್ರದಲ್ಲಿ ರೈತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.