Home News ರೈತರ ಮನೆ ಬಾಗಿಲಿಗೆ ಸೌಲಭ್ಯಗಳು ತಲುಪಿಸಲು ಅಧಿಕಾರಿಗಳು ವಿಶೇಷ ಕಾರ್ಯಕ್ರಮ ರೂಪಿಸಿ

ರೈತರ ಮನೆ ಬಾಗಿಲಿಗೆ ಸೌಲಭ್ಯಗಳು ತಲುಪಿಸಲು ಅಧಿಕಾರಿಗಳು ವಿಶೇಷ ಕಾರ್ಯಕ್ರಮ ರೂಪಿಸಿ

0

ನಗರದ ತಾಲ್ಲೂಕು ಕಚೇರಿಯ ಮುಂಭಾಗದ ಕೃಷಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ 2020-21 ನೇ ಸಾಲಿನ ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ ಮಾಹಿತಿ ಜಾಥಗೆ ಹಸಿರು ನಿಶಾನೆ ತೋರಿ ಚಾಲನೆ ನೀಡಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.
ರಾಜ್ಯದಲ್ಲಿ ರೈತರ ಸಮಸ್ಯೆಗಳನ್ನು ಪರಿಹರಿಸಿ ಸೌಲಭ್ಯಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಸರ್ಕಾರ ವಿಶೇಷ ಕಾರ್ಯಕ್ರಮವನ್ನು ರೂಪಿಸಬೇಕಿದೆ ಎಂದು ಅವರು ತಿಳಿಸಿದರು.
ಸರ್ಕಾರ ರೈತರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತದೆ. ಅದರ ಕುರಿತು ವ್ಯಾಪಕ ಪ್ರಚಾರ ಮತ್ತು ಮಾಹಿತಿ ಕೊರತೆಯಿಂದ ಅರ್ಹ ರೈತರಿಗೆ ಸೌಲಭ್ಯಗಳು ಲಭಿಸುತ್ತಿಲ್ಲ. ಈ ನಿಟ್ಟಿನಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ಹೋಬಳಿ ಮಟ್ಟದಲ್ಲಿರುವ ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲು ಅರಿವು ಮತ್ತು ಜಾಗೃತಿ ಮೂಡಿಸಬೇಕೆಂದು ಹೇಳಿದರು.
ತಾಲ್ಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಸ್.ವಿ.ಮಂಜುನಾಥ್ ಮಾತನಾಡಿ, ಬೆಳೆ ಸಮೀಕ್ಷೆಯಿಂದ ಆಗುವ ಪ್ರಯೋಜನ ಹಾಗೂ ಅನುಷ್ಠಾನದ ಕ್ರಮಗಳ ಕುರಿತು ರೈತರಿಗೆ ಮಾಹಿತಿ ನೀಡಿದರು.
ತಹಶೀಲ್ದಾರ್ ಕೆ.ಅರುಂಧತಿ, ಕೋಚಿಮುಲ್ ನಿರ್ದೇಶಕ ಶ್ರೀನಿವಾಸ್, ಕೃಷಿ ಇಲಾಖೆಯ ಅಧಿಕಾರಿ ಶ್ರೀನಿವಾಸ್, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್, ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ರಾಮಕೃಷ್ಣಪ್ಪ, ನಗರಸಭಾ ಸದಸ್ಯ ಮುನಿರಾಜು, ಕೃಷಿ ಇಲಾಖೆಯ ಸಿಬ್ಬಂದಿ ಹಾಜರಿದ್ದರು.
ರೈತರ ಬೆಳೆ ಸಮೀಕ್ಷೆ ಆಪ್ ಕುರಿತು ಮಾಹಿತಿ ಹಾಗೂ ಬಳಕೆಯ ವಿಧಾನ: ರೈತರ ಬೆಳೆ ಸಮೀಕ್ಷೆ App ಅನ್ನು ರೈತರು ಸದುಪಯೋಗಪಡಿಸಿಕೊಳ್ಳಿ
 

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi