ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಗುರುವಾರ ಆಯೋಜಿಸಿದ್ದ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿರಸ್ತೇದಾರ್ ಕೆ.ಎನ್.ಮಂಜುನಾಥ್ ಮಾತನಾಡಿದರು.
ವಚನ ಸಾಹಿತ್ಯದ ಮೂಲಕ ಸಾಮಾಜಿಕ ಮೌಢ್ಯತೆಯನ್ನು ಹೊಡೆದು ಹಾಕುವಲ್ಲಿ ಶ್ರಮಿಸಿದ ನಿಜಶರಣ ಅಂಬಿಗರ ಚೌಡಯ್ಯ ಅವರ ಸಾಧನೆ ಅವಿಸ್ಮರಣೀಯ ಎಂದು ಅವರು ಹೇಳಿದರು.
ಅಂಬಿಗರ ಚೌಡಯ್ಯನವರು ತಮ್ಮ ವಚನಗಳಿಂದ ಸಮಾಜ ಪರಿವರ್ತನೆಗೆ ಶ್ರಮಿಸಿದ ಮಹಾನ್ ಶರಣರಾಗಿದ್ದರು. ಶರಣರ ಮಹತ್ವಗಳನ್ನು ತತ್ವಗಳನ್ನು ಮತ್ತು ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆದಾಗ ಮಾತ್ರ ಶರಣರ ಜಯಂತ್ಯುತ್ಸವ ಆಚರಿಸುವುದು ಸಾರ್ಥಕ ವಾಗುತ್ತದೆ. ನೇರ ನಡೆ ನುಡಿಗೆ ಹೆಸರಾದ ಚೌಡಯ್ಯನವರು ನಿಜ ಶರಣ ಎಂದೇ ಖ್ಯಾತಿಯನ್ನು ಗಳಿಸಿದ್ದರು ಎಂದರು.
ತಾಲ್ಲೂಕು ಬೆಸ್ತರ ಸಂಘದ ಅಧ್ಯಕ್ಷ ಶಿವಣ್ಣ, ಮುಖಂಡರಾದ ಲಕ್ಷ್ಮಿನಾರಾಯಣ(ಲಚ್ಚಿ), ಗೋಪಾಲ್, ರಮೇಶ್, ನಗರಸಭೆ ಆರೋಗ್ಯಾಧಿಕಾರಿ ಶೋಭಾರಾಣಿ, ರಾಜಸ್ವ ನಿರೀಕ್ಷಕ ಪ್ರಶಾಂತ್, ಉಪನ್ಯಾಸಕ ಬಿ.ವಿ.ಪ್ರಕಾಶ್ ಹಾಜರಿದ್ದರು.