ಶಿಡ್ಲಘಟ್ಟ ತಾಲ್ಲೂಕಿನ ವೀರಾಪುರ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ಪದಾರ್ಥಗಳನ್ನು ವಿತರಿಸುವ ಕಾರ‍್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಡಿ.ವೆಂಕಟೇಶ್ ಮಾತನಾಡಿದರು.
ಇದೀಗ ಕೊರೊನಾ ಸೋಂಕಿನ ಆತಂಕ ಎಲ್ಲರನ್ನೂ ಆವರಿಸಿದೆ. ಮುಂದಿನ ದಿನಗಳಲ್ಲಿ ಮೂರನೆ ಅಲೆ ಬರುತ್ತದೆ ಎಂದು ಆರೋಗ್ಯ ಇಲಾಖೆಯ ತಜ್ಞರು ಅಭಿಪ್ರಾಯಪಟ್ಟಿದ್ದು ಇಂತಹ ಪರಿಸ್ಥಿತಿಯಲ್ಲಿ ಮಕ್ಕಳ ಆರೋಗ್ಯದ ಕಡೆ ಹೆಚ್ಚಿನ ಆಧ್ಯತೆ ನೀಡಬೇಕು. ಪೋಷಕರು, ಅಂಗನವಾಡಿ ಕಾರ‍್ಯಕರ್ತರು ಸೇರಿ ಸಂಬಂಧಿಸಿದ ಎಲ್ಲರೂ ಗಮನ ಹರಿಸಬೇಕೆಂದರು.
ಮಕ್ಕಳಲ್ಲಿನ ಅಪೌಷ್ಟಿಕತೆಯನ್ನು ಹೋಗಲಾಡಿಸಲು ಸರ್ಕಾರ ನಾನಾ ಯೋಜನೆಗಳನ್ನು ರೂಪಿಸಿದ್ದು ಅದಕ್ಕೆ ಮಕ್ಕಳ ಪೋಷಕರು ಹಾಗೂ ಇಲಾಖೆಯ ಅಧಿಕಾರಿ ಸಿಬ್ಬಂದಿಯು ಕೈ ಜೋಡಿಸಿದಾಗ ಮಾತ್ರ ಉತ್ತಮ ಆರೋಗ್ಯಯುಕ್ತ ಮಕ್ಕಳನ್ನು ರೂಪಿಸಬಹುದು ಎಂದು ಅವರು ಅಭಿಪ್ರಾಯಪಟ್ಟರು.
ಅಂಗನವಾಡಿ ಕೇಂದ್ರಕ್ಕೆ ಸರ್ಕಾರವು ನಾನಾ ರೀತಿಯ ಪೌಷ್ಟಿಕ ಆಹಾರ ಪದಾರ್ಥಗಳನ್ನು ಮಕ್ಕಳಿಗಾಗಿ ಪೂರೈಸುತ್ತಿದೆ. ಜತೆಗೆ ಸಂಘ ಸಂಸ್ಥೆಗಳು ಸಹ ನೆರವನ್ನು ನೀಡುತ್ತವೆ. ಈ ಬಗ್ಗೆ ಪೋಷಕರು ಗಮನ ಹರಿಸಿ ಮಕ್ಕಳಿಗೆ ಪೌಷ್ಟಿಕ ಆಹಾರ ಸರಿಯಾಗಿ ಸಿಗುತ್ತಿದೆಯಾ ಇಲ್ಲವಾ ಎಂಬುದನ್ನು ಪರಿಶೀಲಿಸಿ ಖಾತ್ರಿಪಡಿಸಿಕೊಳ್ಳಬೇಕೆಂದರು.
ಇಲಾಖೆಯಿಂದ ಪೂರೈಕೆಯಾದ ಪೌಷ್ಟಿಕ ಆಹಾರ ಹಾಗೂ ಶ್ರೀಸಾಯಿ ಸ್ಯೂರ್ ಪೌಷ್ಟಿಕ ಪದಾರ್ಥಗಳನ್ನು ವಿತರಿಸಲಾಯಿತು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರತ್ನಮ್ಮ, ಅಂಗನವಾಡಿ ಕಾರ‍್ಯಕರ್ತೆ ಶೋಭ ವೆಂಕಟೇಶ್, ಅಂಗನವಾಡಿ ಸಮಿತಿ ಸದಸ್ಯರು, ಪೋಷಕರು, ಗ್ರಾಮಸ್ಥರು ಹಾಜರಿದ್ದರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi