ಶಿಡ್ಲಘಟ್ಟ ತಾಲ್ಲೂಕಿನ ಚಿಕ್ಕದಾಸರಹಳ್ಳಿ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ಹಾಗೂ ಗರ್ಭಿಣಿ ಫಲಾನುಭವಿಗಳಿಗೆ ಸೀಮಂತ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ನವತಾಜರ್, ಗರ್ಭಿಣಿಯರಿಗೆ ಸಾಕಷ್ಟು ವಿಷಯಗಳು ತಿಳಿಹೇಳಬೇಕಾಗುತ್ತದೆ. ತಮ್ಮ ಆರೋಗ್ಯ ಮತ್ತು ಹುಟ್ಟುವ ಮಗುವಿನ ಉತ್ತಮ ಆರೋಗ್ಯಕ್ಕೆ ಏನೇನು ಆಹಾರವನ್ನು ಸೇವಿಸಬೇಕು. ಸಕಾರಾತ್ಮಕವಾಗಿ ಯೋಚಿಸಬೇಕು ಮುಂತಾದ ಸಂಗತಿಗಳನ್ನು ತಿಳಿಸುವ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಸೀಮಂತ ಕಾರ್ಯಕ್ರಮವನ್ನು ಆಚರಣೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಎಸಿಡಿಪಿಓ ಮಹೇಶ್, ಮೇಲ್ವಿಚಾರಕಿ ರೋಜಾರಮಣಿ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಂಜುನಾಥ್, ಗ್ರಾಮ ಪಂಚಾಯತಿ ಅಧ್ಯಕ್ಷೆ ಭಾಗ್ಯಮ್ಮ, ಚಿಂತಡಪಿ ಶಾಲೆ ಮುಖ್ಯ ಶಿಕ್ಷಕ ರವಿ, ಅಂಗನವಾಡಿ ಕಾರ್ಯಕರ್ತರಾದ ಪರ್ವತಮ್ಮ, ಸುಶೀಲಮ್ಮ, ಮಂಜುಳಮ್ಮ, ಆರತಿ, ಅಂಗನವಾಡಿ ಕಾರ್ಯಕರ್ತರು ಹಾಗೂ ಆಶಾ ಕಾರ್ಯಕರ್ತರು, ಗರ್ಭಿಣಿಯರು ಮತ್ತು ಗ್ರಾಮಸ್ಥರು ಹಾಜರಿದ್ದರು.