ತಾಲ್ಲೂಕಿನ ಆನೂರು ಗ್ರಾಮ ಪಂಚಾಯತಿಯಲ್ಲಿ ಕೊರೊನಾ ಕಾರ್ಯಪಡೆಯ ಸಭೆಯಲ್ಲಿ ಸರ್ಕಾರದ ಮಾರ್ಗಸೂಚಿಗಳು ಮತ್ತು ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಗ್ರವಾಗಿ ಚರ್ಚಿಸಿ ಎಲ್ಲರೂ ಸಾಮೂಹಿಕವಾಗಿ ಸೋಂಕು ನಿಯಂತ್ರಿಸಲು ಶ್ರಮಿಸಬೇಕೆಂದು ನರೇಗಾ ಸಹಾಯಕ ನಿರ್ದೇಶಕ ಹಾಗೂ ನೋಡಲ್ ಅಧಿಕಾರಿ ಚಂದ್ರಪ್ಪ ಕರೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮೀಣ ಕಾರ್ಯಪಡೆಯ ಸದಸ್ಯರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಲಾಯಿತು.
ಸಭೆಯಲ್ಲಿ ಆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೇತ್ರಾವತಿ, ಗ್ರಾಮ ಪಂಚಾಯಿತಿ ಸದಸ್ಯ ಪ್ರಕಾಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಾತ್ಯಾಯನಿ ಹಾಗೂ ಕೊರೋನಾ ಕಾರ್ಯಪಡೆಯ ಸದಸ್ಯರು ಹಾಜರಿದ್ದರು.