Anur, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಆನೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಎಚ್.ಆರ್. ವೆಂಕಟೇಶ್ ಹಾಗೂ ಉಪಾಧ್ಯಕ್ಷರಾಗಿ ನೇತ್ರಾವತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಒಟ್ಟು 16 ಸದಸ್ಯ ಬಲ ಹೊಂದಿರುವ ಆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷಸ್ಥಾನ ಹಿಂದುಳಿದ ವರ್ಗ ಎ ಹಾಗು ಉಪಾಧ್ಯಕ್ಷ ಸ್ಥಾನಕ್ಕೆ ಎಸ್ಸಿ ಮಹಿಳೆ ಮೀಸಲು ನಿಗದಿಪಡಿಸಲಾಗಿದ್ದು ಶನಿವಾರ ಚುನಾವಣೆ ಪ್ರಕ್ರಿಯೆ ನಡೆಯಿತು.
ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕೇವಲ ಒಂದೊಂದು ನಾಮಪತ್ರ ಸಲ್ಲಿಕೆಯಾದ ಹಿನ್ನಲೆಯಲ್ಲಿ ಅಧ್ಯಕ್ಷ ಹಾಗು ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಅಮರನಾರಾಯಣ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.
ಜೆಡಿಎಸ್ ಹಿರಿಯ ಮುಖಂಡ ಬಂಕ್ ಮುನಿಯಪ್ಪ, ಗ್ರಾ.ಪಂ ಸದಸ್ಯರಾದ ವಿಜಯೇಂದ್ರ, ಸಂತೋಷ್, ಲತಾದೇವರಾಜ್, ಉಷಾರಾಣಿ, ಮುರಳಿ, ಪ್ರಕಾಶ್, ಪಿಡಿಓ ಕಾತ್ಯಾಯಿನಿ, ಬೋದಗೂರು ಪ್ರಭಾಕರ್, ಸುರೇಶ್, ಹಿತ್ತಲಹಳ್ಳಿ ಮುನಿರಾಜು. ದೇವರಾಜ್, ರಾಮಕೃಷ್ಣ, ಚಿಕ್ಕಪ್ಪಣ್ಣ, ಆನಂದ್ ಹಾಜರಿದ್ದರು.