ತಾಲ್ಲೂಕಿನ ಆನೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ನೇತ್ರಾವತಿ.ಪಿ ಹಾಗೂ ಉಪಾಧ್ಯಕ್ಷರಾಗಿ ಪಿ.ಎನ್.ವಿಜಯೇಂದ್ರ ಆಯ್ಕೆಯಾಗಿದ್ದಾರೆ.
ಒಟ್ಟು 16 ಸದಸ್ಯ ಬಲ ಹೊಂದಿರುವ ಆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷಸ್ಥಾನ ಪರಿಶಿಷ್ಟ ಜಾತಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮೀಸಲು ನಿಗದಿಪಡಿಸಲಾಗಿದ್ದು ಸೋಮವಾರ ಚುನಾವಣೆ ಪ್ರಕ್ರಿಯೆ ನಡೆಯಿತು.
ಅಧ್ಯಕ್ಷ ಹಾಗು ಉಪಾಧ್ಯಕ್ಷ ಸ್ಥಾನಕ್ಕೆ ಕೇವಲ ಒಂದೊಂದು ನಾಮಪತ್ರ ಸಲ್ಲಿಕೆಯಾದ ಹಿನ್ನಲೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ನಗರಸಭೆ ಪೌರಾಯುಕ್ತ ಶ್ರೀನಿವಾಸ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.