Home News ವಿದ್ಯಾರ್ಥಿ ಜೀವನದಲ್ಲಿಯೇ ತಮ್ಮ ಆಸಕ್ತಿ ಮತ್ತು ಅಭಿರುಚಿಯನ್ನು ಗುರುತಿಸಿಕೊಳ್ಳಬೇಕು

ವಿದ್ಯಾರ್ಥಿ ಜೀವನದಲ್ಲಿಯೇ ತಮ್ಮ ಆಸಕ್ತಿ ಮತ್ತು ಅಭಿರುಚಿಯನ್ನು ಗುರುತಿಸಿಕೊಳ್ಳಬೇಕು

0
ARM PU College Shreyostu 22

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳ ಗೇಟ್ ಬಳಿ ಇರುವ ಶ್ರೀ ಬಾಲಾಜಿ ಕಲ್ಯಾಣ ಮಂಟಪದಲ್ಲಿ ARM PU College “ಶ್ರೇಯೋಸ್ತು 2022” ಹಾಗೂ ಹಿರಿಯ ವಿದ್ಯಾರ್ಥಿಗಳಿಂದ ಕಿರಿಯ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ನಿವೃತ್ತ ಐಎಎಸ್ ಅಧಿಕಾರಿ ಎನ್.ಸಿ ಮುನಿಯಪ್ಪ ಅವರು ಮಾತನಾಡಿದರು.

ವಿದ್ಯಾರ್ಥಿ ಜೀವನದಲ್ಲಿಯೇ ತಮ್ಮ ಆಸಕ್ತಿ ಮತ್ತು ಅಭಿರುಚಿಯನ್ನು ಗುರುತಿಸಿಕೊಳ್ಳಬೇಕು. ಗುರಿ ನಿಶ್ಚಯ ಮಾಡಿಕೊಂಡು ಅದರೆಡೆಗೆ ಸಾಗಿದಾಗ ತಮ್ಮ ಗುರಿಯನ್ನು ತಲುಪಿ ಸಮಾಜದಲ್ಲಿ ಎತ್ತರಕ್ಕೆ ಬೆಳೆಯಲು ಸಾಧ್ಯ ಎಂದು ತಿಳಿಸಿದರು.

ಕಾಲೇಜಿನಲ್ಲಿ ಕಲಿಯುವ ವಿದ್ಯೆಯು ನಿಮ್ಮ ಜ್ಞಾನವನ್ನು ಹೆಚ್ಚಿಸುತ್ತದೆ ಅದರ ಜೊತೆಗೆ ನಿಮ್ಮ ಉತ್ತಮ ಅಭಿರುಚಿಗಳು ನಿಮ್ಮ ವ್ಯಕ್ತಿತ್ವವನ್ನು ರೂಪಿಸುತ್ತವೆ ಎಂದರು. ಇಂದು ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳನ್ನು ಸಕಾರಾತ್ಮಕವಾಗಿ ಜ್ಞಾನಾರ್ಜನೆಗಾಗಿ ಬಳಕೆ ಮಾಡಿ ಕೊಳ್ಳುವ ಮೂಲಕ ಶಾಲೆಯ ಹೊರತಾಗಿ ಹೊಸ ಹೊಸ ವಿಚಾರಗಳನ್ನು ತಿಳಿದು ಕೊಳ್ಳಬಹುದು. ನಿಮ್ಮ ಗುರಿ ಸಾಧನೆಗೆ ವಾಟ್ಸಪ್, ಟ್ವಿಟರ್, ಫೇಸ್ ಬುಕ್ ಗಳನ್ನು ಮೆಟ್ಟಿಲುಗಳಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿಧ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಿನಿ ಗೀತೆಗಳಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು. ಕಾಲೇಜು ಸಂಸ್ಥಾಪಕ ಮುನಿರತ್ನಂ ಹಾಗೂ ಪ್ರಾಧ್ಯಾಪಕರು ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version