ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮಪಂಚಾಯಿತಿ ಕಾರ್ಯಾಲಯದಲ್ಲಿ ಬುಧವಾರ ಕೊರೊನಾ ವಾರಿಯರ್ ಗಳಾದ ಶಿಕ್ಷಕರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಫೇಸ್ ಶೀಲ್ಡ್, ಮಾಸ್ಕ್ ಮತ್ತು ಸ್ಯಾನಿಟೈಸರ್ ಗಳನ್ನು ವಿತರಿಸಿ ಮೇಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್.ಎ.ಉಮೇಶ್ ಮಾತನಾಡಿದರು.
ಈಗಿನ ಕೊರೊನಾ ಎರಡನೇ ಅಲೆಯ ಭೀಕರತೆಯಲ್ಲಿ ಮನೆಮನೆಗೂ ಭೇಟಿ ನೀಡಿ ಮಾಹಿತಿ ಸಂಗ್ರಹಿತ್ತಾ, ತಾಯಂದಿರ ಹಾಗೆ ಸೋಂಕಿತರ ಔಷಧೋಪಚಾರ, ತುರ್ತು ಸಮಯದಲ್ಲಿ ತಾಲ್ಲೂಕು ಅಥವಾ ಜಿಲ್ಲಾ ಕೇಂದ್ರಕ್ಕೆ ಕರೆದೊಯ್ಯುವ ಕೆಲಸ ನಿರ್ವಹಿಸುವ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆರು ತಮ್ಮ ಕುಟುಂಬದಿಂದಲೂ ದೂರವಿದ್ದು ಜನರ ಯೋಗಕ್ಷೇಮಕ್ಕಾಗಿ ಸೇವೆ ಸಲ್ಲಿಸುತ್ತಿರುವ ಯರನ್ನು ಎಲ್ಲರೂ ಗೌರವದಿಂದ ಕಾಣಬೇಕು ಎಂದು ಅವರು ತಿಳಿಸಿದರು.
ಅವರ ಸೇವೆಯ ಬಗ್ಗೆ ಗೌರವವಿರಲಿ, ಸಾಧ್ಯವಾದಷ್ಟೂ ಅವರ ಕೆಲಸಕ್ಕೆ ನೆರವಾಗಿ. ಅವರ ಸೂಚನೆಗಳನ್ನು ಪಾಲಿಸುವ ಮೂಲಕ ಕೊರೊನಾ ರೋಗವನ್ನು ಹಿಮ್ಮೆಟ್ಟಿಸೋಣ ಎಂದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಾತ್ಯಾಯಿನಿ, ಸದಸ್ಯರು, ಸಿಬ್ಬಂದಿ ಹಾಜರಿದ್ದರು.