ಮೇಲೂರು ಗ್ರಾಮ ಪಂಚಾಯಿತಿ ಮತ್ತು “ಷೆಲ್ ಅಪರೆಲ್ಸ್ ಪ್ರೈವೇಟ್ ಲಿಮಿಟೆಡ್” ಸಹಯೋಗದೊಂದಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲೂರು ವ್ಯಾಪ್ತಿಗೆ ಒಳಪಡುವ ಎಲ್ಲಾ ಗ್ರಾಮಗಳ 36 ಮಂದಿ ಆಶಾ ಕಾರ್ಯಕರ್ತೆಯರಿಗೆ ಉಚಿತ ದಿನಸಿ ಕಿಟ್ ಗಳನ್ನು ಗುರುವಾರ ವಿತರಿಸಲಾಯಿತು.
ಕಾಯಕ್ರಮದಲ್ಲಿ ಭಾಗಿಯಾಗಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್.ಎ. ಉಮೇಶ್ ಮಾತನಾಡಿ, ಷೆಲ್ ಅಪರೆಲ್ಸ್ ನ ಸಂಸ್ಥಾಪಕರಾದ ವಸುಧಾ ಮತ್ತು ವಾಸುಕಿ ಅವರು ಗ್ರಾಮಗಳಲ್ಲಿ ಮನೆಮನೆ ಭೇಟಿ ನ್ಉತ್ತಾ ಕೊರೊನಾ ಬಗ್ಗೆ ಅರಿವು ಮೂ್ಡಿಸುವುದರ ಜೊತೆಗೆ ಸೋಂಕಿತರ ನೆರವಿಗೆ ಧಾವಿಸುವ ಆಶಾ ಕಾರ್ಯಕರ್ತೆಯರಿಗೆ ನೆರವಾಗುವುದು ನಮ್ಮ ಕರ್ತವ್ಯ ಎಂದು ಹೇಳಿ ದಿನಸಿ ಕಿಟ್ ಕೊಡಲು ಸಹಾಯ ಹಸ್ತ ಚಾಚಿದ್ದಾರೆ. ಈ ರೀತಿಯ ದಾನಿಗಳ ಅಗತ್ಯವಿದೆ. ಆಶಾ ಕಾರ್ಯಕರ್ತೆಯರಿಗೆ ಅಕ್ಕಿ, ಬೇಳೆ, ಎಣ್ಣೆ, ಸೋಪ್, ಬೆಲ್ಲ, ರವೆ ಸೇರಿದಂತೆ ದಿನಬಳಕೆ ಅಗತ್ಯ ವಸ್ತುಗಳನ್ನ್ ನೀಡುತ್ತಿರುವುದಾಗಿ ತಿಳಿಸಿದರು.
ಗ್ರಾಮ ಪಂಚಾಯಿತಿ ಪಿಡಿಓ ಕಾತ್ಯಾಯಿನಿ, ವೈದ್ಯಾಧಕಾರಿ ಡಾ. ರಮೇಶ್, ಲ್ಯಾಬ್ ಟೆಕ್ನಿಷಿಯನ್ ದೇವರಾಜ್, ಗ್ರಾಮ ಪಂಚಾಯತಿ ಸದಸ್ಯರು, ಆರೋಗ್ಯ ಸಿಬ್ಬಂದಿ ಹಾಜರಿದ್ದರು.
Follow ನಮ್ಮ ಶಿಡ್ಲಘಟ್ಟ on
Facebook: https://www.facebook.com/sidlaghatta
Twitter: https://twitter.com/hisidlaghatta
Instagram: https://www.instagram.com/sidlaghatta
Telegram: https://t.me/Sidlaghatta
WhatsApp: https://wa.me/917406303366?text=Hi