17.1 C
Sidlaghatta
Friday, November 22, 2024

ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕಾಮಗಾರಿಗೆ ಭೂಮಿ ಪೂಜೆ

Bangalore North University: A Model University for the World

- Advertisement -
- Advertisement -

Amaravati, Jangamakote, Sidlaghatta : ಇಡೀ ವಿಶ್ವಕ್ಕೆ ಪ್ರಯೋಜನವಾಗುವಂತಹ, ಗರುತಿಸಿಕೊಳ್ಳುವಂತಹ ಪ್ರತಿಭೆಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಿಂದ ಹೊರಹೊಮ್ಮಲಿವೆ, ವಿಶ್ವಕ್ಕೆ ಇದೊಂದು ಮಾದರಿ ವಿವಿ ಆಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್ ಅಶ್ವಥ್ ನಾರಾಯಣ್ ತಿಳಿಸಿದರು.

ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಹೋಬಳಿಯ ಅಮರಾವತಿ ಗ್ರಾಮದಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ನ ಕಟ್ಟಡದ ಕಾಮಗಾರಿಗೆ ಸೋಮವಾರ ಭೂಮಿ ಪೂಜೆ ಮತ್ತು ಶಿಲಾನ್ಯಾಸವನ್ನು ನೆರವೇರಿಸಿ ಅವರು ಮಾತನಾಡಿದರು.

ವ್ಯವಸಾಯ ಕ್ಷೇತ್ರದಿಂದ ಬಾಹ್ಯಾಕಾಶ ಕ್ಷೇತ್ರದವರೆಗೆ ಹೊಸ ಹೊಸ ಆವಿಷ್ಕಾರಗಳು, ತಂತ್ರಜ್ಞಾನಗಳನ್ನು ಅನ್ವಯಿಸಿಕೊಂಡು ಹೆಚ್ಚಿನ ಅನುಕೂಲಗಳನ್ನು ಪಡೆಯಲು ಮೂಲ ಆಧಾರವೇ ಶಿಕ್ಷಣ. ಸ್ವಾವಲಂಬನೆ, ಸ್ವಯತ್ತತೆ ಹೊಂದಲು ಹಾಗೂ ಸಮಾಜದಲ್ಲಿನ ಯಾವುದೇ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ. ಅಂತಹ ಶಿಕ್ಷಣಕ್ಕೆ ಒತ್ತು ನೀಡಿ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ಜಿಲ್ಲೆಗಳ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ಅನುಕೂಲವಾಗಲೆಂದು ಅಮರಾವತಿಯಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕಟ್ಟಡಗಳನ್ನು ಉತ್ಕೃಷ್ಟ ದರ್ಜೆಯಲ್ಲಿ ಇಲ್ಲಿನ ನೈಸರ್ಗಿಕತೆಗೆ ತೊಂದರೆಯಾಗದ ರೀತಿಯಲ್ಲಿ ನಿರ್ಮಾಣ ಮಾಡಲಾಗುವುದು. ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಕಲಿಕೆಗೆ ಪೂರಕವಾಗಿ 172 ಎಕರೆ ವ್ಯಾಪ್ತಿಯಲ್ಲಿ ಸುಮಾರು 88 ಕೋಟಿ ವೆಚ್ಚದಲ್ಲಿ ವಿಶ್ವ ದರ್ಜೆಯ ವಿಶ್ವವಿದ್ಯಾಲಯ ಇಲ್ಲಿ ತಲೆಯತ್ತಲಿದೆ ಎಂದರು.

ಶಿಕ್ಷಣವನ್ನು ನೆಪ ಮಾತ್ರಕ್ಕೆ ಪ್ರಮಾಣ ಪತ್ರ ಪಡೆಯಲು ವಿದ್ಯಾರ್ಹತೆ ಹೊಂದಬಾರದು. ನಿಜವಾದ ಕಲಿಕೆಗೆ ವಿದ್ಯಾರ್ಥಿಗಳು ತೊಡಗಬೇಕು. ವಿದ್ಯಾರ್ಥಿಗಳ ಭವಿಷ್ಯತ್ತಿಗೆ ಒತ್ತು ನೀಡಿ ಶಿಕ್ಷಣವನ್ನು ಮತ್ತಷ್ಟು ಗುಣಮಟ್ಟದಲ್ಲಿ ನೀಡಬೇಕು ಎಂದು ಕೇಂದ್ರ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು

ಜಾರಿಗೆ ತಂದಿದೆ. ಅಂತಹ ಶಿಕ್ಷಣ ನೀತಿಯನ್ನು ದೇಶದಲ್ಲೆ ಮೊದಲಿಗೆ ಜಾರಿಗೆ ತಂದ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ ಎಂದರು.

ರೈತರು ಹೆಚ್ಚಿನ ಆತಂಕಕ್ಕೆ ಒಳಗಾಗಬೇಡಿ :

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಸ್ಥಾಪನೆಗೆ ಸಹಕರಿಸಿ ತಮ್ಮ ವ್ಯವಸಾಯದ ಭೂಮಿಯನ್ನೇ ನೀಡಿದ ಇಲ್ಲಿನ ಅನ್ನದಾತ ರೈತರು ಹೆಚ್ಚಿನ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ರೈತರು ನೀಡಿದ ಜಮೀನಿಗೆ ಬದಲಿಯಾಗಿ ಸರ್ಕಾರ ನೀಡಿರುವ ಜಮೀನನ್ನು ಇನ್ನೆರಡು ತಿಂಗಳಿನಲ್ಲಿ ಪಹಣಿ ತಿದ್ದುಪಡಿ ಮಾಡಿಸಿ ತಮ್ಮೆಲ್ಲರಿಗೆ ದಾಖಲೆಗಳನ್ನು ನೀಡುತ್ತೇವೆ ಎಂದು ಭರವಸೆ ನೀಡಿದರು.

ವಿಶ್ವವಿದ್ಯಾಲಯ ಸ್ಥಾಪನೆಗೆ ಸಹಕಾರ ನೀಡಿದ ಸ್ಥಳೀಯ ರೈತರಿಗೆ, ಸ್ಥಳೀಯ ಜನಪ್ರತಿನಿಧಿಗಳಿಗೆ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಆಡಳಿತ ವರ್ಗಕ್ಕೆ, ಇಲ್ಲಿನ ಸರ‍್ವಜನಿಕರಿಗೆ ಸಚಿವರು ವಿಶೇಷವಾಗಿ ಧನ್ಯವಾದಗಳನ್ನು ತಿಳಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು ಮಾತನಾಡಿ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ನಿರ್ಮಾಣ ಕಾರ್ಯ ಒಂದು ಐತಿಹಾಸಿಕ ಮೈಲುಗಲ್ಲಾಗಿದೆ. 21ನೇ ಶತಮಾನ ಜ್ಞಾನದ ಶತಮಾನವಾಗಿದೆ. ಇದಕ್ಕೆ ಇಂಬು ನೀಡುವಂತೆ ಅಮರಾವತಿಯಲ್ಲಿ ಜ್ಞಾನ ನಗರಿಯನ್ನು ನಿರ್ಮಿಸುತ್ತಿರುವುದು ಶ್ಲಾಘನೀಯ. ಅಮರಾವತಿ ಇಡೀ ವಿಶ್ವಕ್ಕೆ ಮಾದರಿಯಾಗಬೇಕು ಎಂದು ತಿಳಿಸಿದರು.

ಭೂಮಿಗೆ ಬಿದ್ದ ಬೀಜ ಎದೆಗೆ ಬಿದ್ದ ಅಕ್ಷರ ಫಲವನ್ನು ನೀಡೇ ನೀಡುತ್ತದೆ ಎಂದು ಖ್ಯಾತ ಸಾಹಿತಿ ದೇವನೂರು ಅವರ ಸಾಹಿತ್ಯದ ಸಾಲುಗಳನ್ನು ಉಲ್ಲೇಖಿಸಿ, ಈ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಬಿತ್ತನೆ, ವಿಸ್ತರಣೆ ಕಾರ್ಯಕ್ಕೆ ಮುಂದಾಗಿ ಬೆಂಗಳೂರು ವಿಶ್ವವಿದ್ಯಾಲಯ ನಿರ್ಮಾಣಕ್ಕೆ ಕಾರಣೀಭೂತರಾಗಿರುವ ಉನ್ನತ ಶಿಕ್ಷಣ ಸಚಿವರನ್ನು ಅಭಿನಂದಿಸಿದರು.

ಶಿಡ್ಲಘಟ್ಟ ಭಾಗವು ಅತಿ ಹೆಚ್ಚು ರೇಷ್ಮೆ ಬೆಳೆಯುವ ಪ್ರದೇಶವಾಗಿದ್ದು , ಇದನ್ನು ಮನಗಂಡು ಸರ್ಕಾರ ಶಿಡ್ಲಘಟ್ಟದಲ್ಲಿ ಉತ್ಕೃಷ್ಟ ದರ್ಜೆಯ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ 75 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದೆ. ಮಹಿಳೆಯರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ, ಮಹಿಳಾ ಶಿಕ್ಷಣಕ್ಕೆ, ಸಬಲೀಕರಣಕ್ಕೆ ಸರ್ಕಾರ ಶ್ರಮಿಸುತ್ತಿದೆ ಎಂದರು.

ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ನಿರಂಜನ ವಾನವಳ್ಳಿ ಮಾತನಾಡಿ, 172 ಎಕರೆಯಲ್ಲಿ ನರ‍್ಮಾಣವಾಗುತ್ತಿರುವ ಈ ವಿಶ್ವವಿದ್ಯಾಲಯ ಮುಂದಿನ ಎರಡು ವರ್ಷಗಳಲ್ಲಿ ತನ್ನೆಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಿ ಅಮರಾವತಿಯ ನೂತನ ಕಟ್ಟಡದಲ್ಲಿಯೇ ಕಾರ್ಯಾರಂಭ ಮಾಡಲಿದೆ. ನಿರ್ಮಾಣ ಕಾರ್ಯಕ್ಕೆ ದೊಡ್ಡ ದೊಡ್ಡ ಸಂಸ್ಥೆಗಳು, ಕೈಗಾರಿಕೆಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದು ಉತ್ಕೃಷ್ಟ ದರ್ಜೆಯಲ್ಲಿ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತದೆ. ಮುಂದಿನ 20 ವರ್ಷಗಳಲ್ಲಿ ಜಾಗತಿಕ ಮಟ್ಟಕ್ಕೆ ವಿಶ್ವವಿದ್ಯಾಲಯ ಗುರುತಿಸಿಕೊಳ್ಳುವ ನಿಟ್ಟಿನಲ್ಲಿ ಯೋಜಿಸಲಾಗಿದೆ. ಈ ಭಾಗದಲ್ಲಿ ಜಿಂಕೆಗಳು, ನವಿಲುಗಳು, ಗುಬ್ಬಚ್ಚಿಗಳು ಇನ್ನಿತರ ಜೈವಿಕ ಸಂಪತ್ತು ಹೇರಳವಾಗಿದ್ದು ಈ ನೈಸರ್ಗಿಕತೆಗೆ ಪೂರಕವಾಗಿ ವಿವಿಯನ್ನು ನಿರ್ಮಾಣ ಮಾಡಲಾಗುತ್ತದೆ. ಉತ್ತರೋತ್ತರವಾಗಿ ವಿಶ್ವವಿದ್ಯಾಲಯ ಬೆಳೆಯುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಲಾಂಛನವನ್ನು ಬಿಡುಗಡೆ ಮಾಡಲಾಯಿತು. ವಿವಿಯ ಕುರಿತು ಕಿರುಚಿತ್ರವನ್ನು ಪ್ರಸಾರ ಮಾಡಲಾಯಿತು. 2023 ರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜವಾಬ್ದಾರಿಯುತ ಮತದಾನದ ಬಗ್ಗೆ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.

ಶಿಡ್ಲಘಟ್ಟ ಕ್ಷೇತ್ರದ ಶಾಸಕ ವಿ. ಮುನಿಯಪ್ಪ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲ ಸಚಿವ ಡಾ. ವೆಂಕಟೇಶ ಮರ‍್ತಿ, ಮೌಲ್ಯಮಾಪನ ಕುಲ ಸಚಿವ ಪ್ರೊ. ಡೋಮಿನಿಕ್, ಸಿಂಡಿಕೇಟ್ ಸದಸ್ಯರುಗಳು, ಕುಂಬಿಗಾನ ಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಸಂಧ್ಯಾ ಶ್ರೀನಿವಾಸ್ ಸೇರಿದಂತೆ, ವಿವಿಧ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ, ವಿದ್ಯಾರ್ಥಿಗಳು, ಸಾರ್ವಜನಿಕರು ಕಾರ್ಯ‍್ಯಕ್ರಮದಲ್ಲಿ ಹಾಜರಿದ್ದರು.

Minister of Higher Education, C.N. Aswath Narayan, laying the foundation stone for Bangalore North University.

Bangalore North University: A Model University for the World

Amaravati, Jangamakote, Sidlaghatta : The construction work for the new campus of Bangalore North University at Amaravati village of Jangamakote hobli in Sidlaghatta taluk has begun with the performing of Bhoomi Puja and laying of the foundation stone. Higher Education Minister C.N. Aswath Narayan expressed his confidence that the talent emerging from this university will benefit the world and it will become a model university for the world. The university will provide higher education to students from Chikkaballapur, Kolar, Bangalore Rural and Bangalore Districts with an emphasis on real learning and advanced technology.

The cost of constructing this world-class university, which will cover an area of 172 acres, is estimated to be around 88 crores. The central government’s National Education Policy, which emphasizes the future of students and higher quality education, will be implemented in this university, making Karnataka the first state in the country to do so.

The government has released a grant of 75 crores for the construction of a high-grade silk market in Shidlaghatta, which is the largest sericulture region. The Minister of Health and Family Welfare and Medical Education, Dr. K. Sudhakar, hailed the construction of the university as a historical milestone and called for Amaravati to be a model for the world.

The university will be built while preserving the biological wealth of the region, which includes deers, peacocks, sparrows, and other species. Contracts for the construction work have been made with major companies and industries, and the buildings will be of the best quality. The goal is for the university to be globally recognized within the next 20 years.

In conclusion, the establishment of Bangalore North University will be a significant boost to education and knowledge, and the government has promised to provide documents for the land given by farmers who donated their agricultural land to establish the university. This university will be a model for the world, and its logo was released at the event, which was attended by various officials, staff, students, and the general public. The pledge on responsible voting was also preached in view of the upcoming 2023 assembly elections.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!