ತಾಲ್ಲೂಕಿನ ಬಶೆಟ್ಟಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಕಮಲಮ್ಮ ಹಾಗೂ ಉಪಾಧ್ಯಕ್ಷರಾಗಿ ಡಿ.ಆರ್.ಧರ್ಮೇಂದ್ರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಒಟ್ಟು 17 ಸದಸ್ಯ ಬಲ ಹೊಂದಿರುವ ಗಂಜಿಗುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷಸ್ಥಾನ ಪರಿಶಿಷ್ಟ ಪಂಗಡ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಬ ಮೀಸಲು ನಿಗದಿಪಡಿಸಲಾಗಿದ್ದು ಸೋಮವಾರ ಚುನಾವಣೆ ಪ್ರಕ್ರಿಯೆ ನಡೆಯಿತು.
ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕೇವಲ ಒಂದೊಂದು ನಾಮಪತ್ರ ಸಲ್ಲಿಕೆಯಾದ ಹಿನ್ನಲೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಕೃಷಿ ಇಲಾಖೆಯ ಉಪನಿರ್ದೇಶಕ ಎಚ್.ಎಲ್.ಚಂದ್ರಕುಮಾರ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.