Chikkadasarahalli, Sidlaghatta : ಸಾವಿರಾರು ಭಕ್ತರ ಸಮ್ಮುಖದಲ್ಲಿ ತಾಲ್ಲೂಕಿನ ಚಿಕ್ಕದಾಸರಹಳ್ಳಿಯ ಸಮೀಪದ ಬ್ಯಾಟರಾಯಸ್ವಾಮಿ ಬ್ರಹ್ಮರಥೋತ್ಸವ ಮಂಗಳವಾರ ಶ್ರದ್ಧಾಭಕ್ತಿಯಿಂದ ನಡೆಸಲಾಯಿತು. ಸುತ್ತಮುತ್ತಲ ಗ್ರಾಮಗಳಿಂದ ಹಾಗೂ ನಗರದಿಂದ ಆಗಮಿಸಿದ್ದ ಭಕ್ತರು ಪೂಜೆಯಲ್ಲಿ ಪಾಲ್ಗೊಂಡು ಭಕ್ತಿಭಾವ ಮೆರೆದರು.
ಬ್ರಹ್ಮರಥೋತ್ಸವದ ಅಂಗವಾಗಿ ಹೂವುಗಳಿಂದ ಅಲಂಕರಿಸಿದ್ದ ರಥದಲ್ಲಿ ದೇವರನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ವಿವಿಧ ಕಲಾ ತಂಡಗಳು ಮತ್ತು ವಿವಿಧ ಅಂಗಡಿಗಳ ಸಾಲು ಎಲ್ಲರ ಆಕರ್ಷಣೆಯಾಗಿತ್ತು. ವಿಶೇಷ ಹೂವಿನ ಅಲಂಕಾರ ಮಾಡಿದ್ದ ಬ್ರಹ್ಮರಥೋತ್ಸವದ ತೇರನ್ನು ದೇವಸ್ಥಾನದ ಸುತ್ತಲೂ ಎಳೆದ ಭಕ್ತರು ಬಾಳೆಹಣ್ಣು, ದವನವನ್ನು ತೇರಿನ ಕಳಶಕ್ಕೆ ಎಸೆದು ತಮ್ಮ ಇಷ್ಟಾರ್ಥಗಳನ್ನು ಈಡೇರಿಸುವಂತೆ ಭಗವಂತನನ್ನು ಕೋರಿಕೊಂಡರು.
ರಥೋತ್ಸವಕ್ಕೆ ಗ್ರೇಡ್ 2 ತಹಶೀಲ್ದಾರ್ ಶ್ರೀನಿವಾಸ ನಾಯ್ಡು ಚಾಲನೆ ನೀಡಿದರು. ರಥೋತ್ಸವ ಅಂಗವಾಗಿ ದೇಗುಲದಲ್ಲಿ ವಿವಿಧ ಪೂಜಾ ಕಾರ್ಯಕ್ರಮಗಳು ನಡೆದವು. ಬತ್ತಾಸು, ಸಿಹಿ ಖಾರದ ತಿಂಡಿಗಳು, ವಿವಿಧ ಹಣ್ಣುಗಳು, ತಂಪು ಪಾನೀಯ, ಕರಿದ ತಿಂಡಿ ತಿನಿಸು, ಮಕ್ಕಳಿಗೆ ಆಟಿಕೆ, ಅಚ್ಚೆ ಹಾಕುವವರು, ಬಳೆಗಾರರು ಉತ್ಸವಕ್ಕೆ ರಂಗು ತುಂಬಿದರು. ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಭಕ್ತರಿಗೆ ಪಾನಕ, ಮಜ್ಜಿಗೆ ಹಾಗೂ ಹೆಸರು ಬೇಳೆ ವಿತರಿಸಲಾಯಿತು. ವಿವಿಧ ಗ್ರಾಮಸ್ಥರು ಹೆಸರುಬೇಳೆ ಪಾನಕ ವಿತರಿಸಿದರು.
ಸುತ್ತಮುತ್ತಲಿನ ಗ್ರಾಮಗಳು ಹಾಗೂ ತಾಲ್ಲೂಕಿನ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿ ದೇವರ ಪೂಜೆಯಲ್ಲಿ ಪಾಲ್ಗೊಂಡರು.
Batarayaswamy Brahmarathotsava Draws Thousands of Devotees in Chikkadasarahalli
Chikkadasarahalli, Sidlaghatta : The Batarayaswamy Brahmarathotsava near Chikkadasarahalli in the Sidlaghatta taluk was celebrated with great devotion on Tuesday, drawing thousands of devotees from nearby villages and towns. The puja was conducted with utmost reverence and the devotees participated in it with full devotion.
The festival’s highlight was the chariot procession, which started with the enshrinement of the deity in a beautifully decorated chariot. The event drew attention from various art troupes and rows of shops, providing an array of attractions for the devotees. The Brahmarathotsava chariot was pulled around the temple by the devotees, who offered bananas and davana into the urn while seeking the Lord’s blessings.
The Grade 2 Tehsildar Srinivasa Naidu led the chariot procession while various worship programs were held in the temple as part of the Rathotsava. The festival’s mood was further enhanced by the presence of food and toy vendors, offering a range of Batasu, sweet and savory snacks, fruits, soft drinks, fried snacks, embroideries, and bracelets for children.
As part of the celebrations, Panaka, Buttermilk, and Hearu Bele were distributed to the devotees who had arrived from different villages.
The festival was a grand success, and its popularity drew thousands of devotees from surrounding villages and different parts of the taluk. The atmosphere was filled with devotion and a sense of community as the people came together to celebrate the Batarayaswamy Brahmarathotsava with joy and fervor.