Sidlaghatta : ಉಡುಪಿಯ ಬ್ರಹ್ಮಾವರದಲ್ಲಿ ನಡೆದ ಸೀನಿಯರ್ ಛೇಂಬರ್ ಇಂಟರ್ನ್ಯಾಷನಲ್ (JCI) ರಾಷ್ಟ್ರೀಯ ಸಮ್ಮೇಳನದಲ್ಲಿ ಶಿಡ್ಲಘಟ್ಟ ತಾಲ್ಲೂಕಿನ ಭಕ್ತರಹಳ್ಳಿಯ ಬಿ. ಚಿದಾನಂದಮೂರ್ತಿ ಅವರಿಗೆ ರಾಷ್ಟ್ರಮಟ್ಟದ ಅತ್ಯುತ್ತಮ ಲೀಜನ್ ಅಧಿಕಾರಿ ಪ್ರಶಸ್ತಿಯನ್ನು ರಾಷ್ಟ್ರೀಯ ಅಧ್ಯಕ್ಷ ಚಿತ್ರ ಕುಮಾರ್ ಪ್ರಧಾನ ಮಾಡಿದರು.
ಚಿದಾನಂದಮೂರ್ತಿಯವರು ವಿಜಯಪುರದ ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ಕಾರ್ಯದರ್ಶಿಯಾಗಿ ಅತ್ಯುತ್ತಮ ಸೇವೆ ಸಲ್ಲಿಸಿರುವುದರಿಂದ ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಸಂಘಟನೆಯ ಮಾರ್ಗದರ್ಶನ ಮತ್ತು ಕ್ರಿಯಾತ್ಮಕ ಕಾರ್ಯಗಳ ಮೂಲಕ ಅವರು ಗುರುತಿಸಿಕೊಂಡಿದ್ದು, ಇವರ ಸೇವೆಯನ್ನು ಶ್ಲಾಘಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಈ ಸಂದರ್ಭದಲ್ಲಿ ವಿಜಯಪುರ ಸೀನಿಯರ್ ಛೇಂಬರ್ ಅಧ್ಯಕ್ಷ ಕೆ. ವೆಂಕಟೇಶ್, ರಾಷ್ಟ್ರೀಯ ಉಪಾಧ್ಯಕ್ಷ ಡಾ. ಎಂ. ಶಿವಕುಮಾರ್, ಸಂಸ್ಥಾಪಕ ಅಧ್ಯಕ್ಷ ಕೆ.ವಿ. ಬೈರೇಗೌಡ, ರಾಷ್ಟ್ರೀಯ ಅಧಿಕಾರಿಗಳಾದ ಎನ್. ಜಯರಾಮ್, ವಿ. ವೆಂಕಟೇಶ್, ನಿಯೋಜಿತ ಅಧ್ಯಕ್ಷ ಅನೀಸ್ ಉರ್ ರೆಹಮಾನ್ ಹಾಜರಿದ್ದರು.