Bhaktarahalli, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಬಿಎಂವಿ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವವನ್ನು “ಸಂವಿಧಾನ ದಿನ”ವನ್ನಾಗಿ ಆಚರಿಸಲಾಯಿತು.
ನಿವೃತ್ತ ಕೆಎಎಸ್ ಅಧಿಕಾರಿ ಎಚ್.ಎಸ್.ರಾಮಕೃಷ್ಣಪ್ಪ ಧ್ವಜಾರೋಹಣ ನೆರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಇಡೀ ಜಗತ್ತಿನಲ್ಲೇ ನಮ್ಮ ಸಂವಿಧಾನ ಅತ್ಯಾಂತ ಶ್ರೇಷ್ಠವಾದ, ಎಲ್ಲರಿಗೂ ಸಮಾನ ನ್ಯಾಯವನ್ನು ಹಕ್ಕುಗಳನ್ನು ಕೊಟ್ಟಂತ ಸಂವಿಧಾನವಾಗಿದೆ ಎಂದರು.
ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ದಾಸ್ ಬರೆದಿರುವ “ಸಂವಿಧಾನ ಓದು” ಪುಸ್ತಕವನ್ನು ಓದಿ, ಅದು ಸಂವಿಧಾನದ ಬಗ್ಗೆ ಅರ್ಥಪೂರ್ಣವಾಗಿ ಸರಳವಾಗಿ ತಿಳಿಸಿಕೊಡುತ್ತದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಸಂವಿಧಾನ ಪೀಠಿಕೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲಾಯಿತು. ಬಿಎಂವಿ ವಿದ್ಯಾಸಂಸ್ಥೆಯ ಅಧ್ಯಕ್ಷ ಬಿ.ವಿ.ಮುನೇಗೌಡ, ಕಾರ್ಯದರ್ಶಿ ಎಲ್.ಕಾಳಪ್ಪ, ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು, ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.