Home News ಸಮಗ್ರ ಅಭಿವೃದ್ಧಿ ಯೋಜನೆ ಅನುಷ್ಠಾನ-ಭಕ್ತರಹಳ್ಳಿ ಗ್ರಾಮ ಪಂಚಾಯಿತಿಗೆ ರಾಷ್ಟ್ರೀಯ ಪ್ರಶಸ್ತಿ

ಸಮಗ್ರ ಅಭಿವೃದ್ಧಿ ಯೋಜನೆ ಅನುಷ್ಠಾನ-ಭಕ್ತರಹಳ್ಳಿ ಗ್ರಾಮ ಪಂಚಾಯಿತಿಗೆ ರಾಷ್ಟ್ರೀಯ ಪ್ರಶಸ್ತಿ

0
Sidlaghatta Bhaktarahalli Grama Panchayat National Award

ಗ್ರಾಮ ಪಂಚಾಯಿತಿಗಳ ಅನುಧಾನವನ್ನು 50 ಲಕ್ಷಗಳಿಂದ 1 ಕೋಟಿ ರೂಗಳಿಗೆ ಏರಿಸುವ ಮೂಲಕ ಸ್ಥಳೀಯ ಸರ್ಕಾರಗಳಿಗೆ ಬಲ ನೀಡುವ ಮಹತ್ಕಾರ್ಯವನ್ನು ಕೇಂದ್ರ ಸರ್ಕಾರ ಮಾಡಿದೆ. ಇದರಿಂದ ಪ್ರತಿ ಹಳ್ಳಿಯಲ್ಲೂ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲು ಸಾಧ್ಯವಾಗಿದ್ದಲ್ಲದೇ, ದುರ್ಬಲ ವರ್ಗದ ಜನರಿಗೆ ಹಣಕಾಸಿನ ನೆರವು ದೊರೆಯಿತು ಎಂದು ಶಾಸಕ ವಿ.ಮುನಿಯಪ್ಪ ತಿಳಿಸಿದರು.

ತಾಲ್ಲೂಕಿನ ಬೆಳ್ಳೂಟಿ ಗೇಟ್ ಬಳಿಯ ಎಸ್.ಎಲ್.ವಿ ಕಲ್ಯಾಣ ಮಂಟಪದಲ್ಲಿ ಸೋಮವಾರ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಫೌಂಡೇಶನ್ ಫಾರ್ ಎಕಲಾಜಿಕಲ್ ಸೆಕ್ಯೂರಿಟಿ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸುವ ಕಲ್ಯಾಣ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳನ್ನು ಕ್ಷೇತ್ರ ಮಟ್ಟದಲ್ಲಿ ಅರ್ಹ ಬಡವರಿಗೆ ಒದಗಿಸಲು ಪಂಚಾಯತಿ ರಾಜ್ ವ್ಯವಸ್ಥೆಯಲ್ಲಿ ಸ್ಥಳೀಯ ಸಂಸ್ಥೆಗಳು ಪ್ರಮುಖ ಪಾತ್ರವಹಿಸುತ್ತವೆ ಎಂದರು.

ಜಿಲ್ಲಾ ಪಂಚಾಯಿತಿ ಸಿ.ಇ.ಒ ಪಿ.ಶಿವಶಂಕರ್ ಮಾತನಾಡಿ, ಗ್ರಾಮಗಳ ಅಭಿವೃದ್ಧಿಗೆ ನರೇಗಾ ಸಹಕಾರಿಯಾಗಿದ್ದು ನಮ್ಮ ಜಿಲ್ಲೆಯಲ್ಲಿ ಇಂದು ಪ್ರತಿ 200 ಮೀಟರ್ ಒಂದು ನರೇಗಾ ಕಾಮಗಾರಿಯ ನಾಮಫಲಕವನ್ನು ಕಾಣಬಹುದಾಗಿದೆ. 200ಲಕ್ಷ ಕೋಟಿ ಲೀಟರ್ ನಷ್ಟು ನೀರನ್ನು ಸಂಗ್ರಹಣೆ ಮಾಡುವ ಸಾಮರ್ಥದ ಕೆಲಸಗಳನ್ನು ಸದರಿ ಯೋಜನೆಯಿಂದ ಮಾಡಲಾಗಿದೆ ಎಂದು ಹೇಳಿದರು.

ಉಪ ಕಾರ್ಯದರ್ಶಿ ಶಿವಕುಮಾರ್, ಆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೇತ್ರಾವತಿ, ಪಿಡಿಓ ಕಾತ್ಯಾಯಣಿ, ಸದಸ್ಯ ಬೆಳ್ಳೂಟಿ ಸಂತೋಷ್, ಇಓ ಚಂದ್ರಕಾತ್, ಸಹಾಯಕ ನಿರ್ದೇಶಕರಾದ ಚಂದ್ರಪ್ಪ, ರಾಜ್ಯ ಸಂಪನ್ಮೂಲ ವ್ಯಕ್ತಿಗಳಾದ ಪಾರ್ಥಜೀ, ಎಫ್ಇಎಸ್ ಸಂಸ್ಥೆಯ ಹಿರಿಯ ಯೋಜನಾಧಿಕಾರಿಗಳಾದ ಶ್ರೀರಂಗ, ನಿಖತ್ ಪರ್ವೀಣ್, ಲೋಕೇಶ್, ಪಲ್ಲವಿ, ಉತ್ತಣ್ಣ, ಸೌಭಾಗ್ಯಮ್ಮ, ಕೃಷ್ಣಪ್ಪ, ಸುಬ್ರಮಣಿ, ಗೋಪಿ, ಲೀಲಾ, ವಿಶ್ವನಾಥ್ ಮತ್ತು ರಮೇಶ್ ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version