Home News ತಾಲ್ಲೂಕು ಆಡಳಿತದಿಂದ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ

ತಾಲ್ಲೂಕು ಆಡಳಿತದಿಂದ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ

0
Bhaktarahalli Taluk Panchayat Event

Bhaktarahalli, Sidlaghatta : ಮಹಿಳೆಯರು ಕೇವಲ ಮನೆ ಕೆಲಸಕ್ಕೆ ಸೀಮಿತವಾಗದೆ ಎಲ್ಲ ಕ್ಷೇತ್ರಗಳಲ್ಲೂ ತಮ್ಮನ್ನು ತೊಡಗಿಸಿಕೊಳ್ಳಬೇಕು. ತಮ್ಮಲ್ಲಿನ ಶಕ್ತಿ ಪ್ರತಿಭೆಯನ್ನು ಬಳಸಿಕೊಂಡು ಎಲ್ಲ ಕ್ಷೇತ್ರಗಳಲ್ಲೂ ಅಭಿವೃದ್ದಿಯ ಹೆಜ್ಜೆ ಇಡುವಂತಾಗಬೇಕೆಂದು ತಾಲ್ಲೂಕು ಪಂಚಾಯಿತಿ ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ ತಿಳಿಸಿದರು.

ತಾಲ್ಲೂಕಿನ ಭಕ್ತರಹಳ್ಳಿ ಗ್ರಾಮದ ಸಮುದಾಯ ಭವನದಲ್ಲಿ ಗುರುವಾರ ತಾಲ್ಲೂಕು ಪಂಚಾಯಿತಿಯಿಂದ ನಡೆದ ಮಹಿಳಾ ಸಬಲೀಕರಣ ಅರಿವು ಹಾಗು ದೌರ್ಜನ್ಯ ಮುಕ್ತ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಮಾಜದ ಅಭಿವೃದ್ದಿ, ಪ್ರಗತಿಯ ಚಟುವಟಿಕೆ, ಆಡಳಿತದ ಪ್ರತಿ ಹಂತದಲ್ಲೂ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಬೇಕು ಎನ್ನುವುದೆ ಸರಕಾರದ ಉದ್ದೇಶವಾಗಿದೆ. ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚುವುದರಿಂದ ಮಹಿಳೆಯ ಸಬಲೀಕರಣ ಆಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಮಹಿಳೆಯರಿಗಾಗಿ ಮೀಸಲಾದ ಕಾರ್ಯಕ್ರಮ ಇದಾಗಿದ್ದು ಈ ಕಾರ್ಯಕ್ರಮದಲ್ಲಿ ಮಹಿಳೆಯರು, ಗರ್ಭಿಣಿಯರು ಹಾಗು ಮಹಿಳೆಯರಿಗೆ ಉಂಟಾಗುವ ಸಮಸ್ಯೆಗಳಿಗೆ ಆರೋಗ್ಯ ಇಲಾಖೆ ಸೇರಿದಂತೆ ಯಾವ ಯಾವ ಇಲಾಖೆ ಯಾವ ರೀತಿ ಸ್ಪಂದಿಸುತ್ತದೆ ಎನ್ನುವುದರ ಬಗ್ಗೆ ಅರಿವು ಮೂಡಿಸಲಾಗುತ್ತಿದೆ.

ಮಹಿಳೆಯರು ಮತ್ತಷ್ಟು ಭಾಗವಹಿಸುವಿಕೆಯನ್ನು ಹೆಚ್ಚಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ತಾಲ್ಲೂಕು ಪಂಚಾಯಿತಿ ಅನಿರ್ಭಂತ ಅನುಧಾನದಲ್ಲಿ ಪ್ರಸಕ್ತ ವರ್ಷದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಇದರ ಮೂಲ ಉದ್ದೇಶ ಮಹಿಳಾ ಸಬಲೀಕರಣ ಆಗಿದೆ ಎಂದು ಅವರು ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.

ಮಹಿಳೆಯರಿಗೆ ಅವರ ಹಕ್ಕುಗಳು ಹಾಗೂ ಕರ್ತವ್ಯಗಳ ಬಗ್ಗೆ ಮನವರಿಕೆ ಮಾಡಿಕೊಡುವುದು ಸೇರಿದಂತೆ ಸಮಾಜದಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಮಹಿಳೆಯರಿಗೆ ಸಿಗಬೇಕಾದ ಸವಲತ್ತುಗಳನ್ನು ಕಲ್ಪಿಸಲು ಈ ಕಾರ್ಯಕ್ರಮ ಅನುಕೂಲಕರವಾಗಿದೆ ಎಂದರು.

ಅನಿರ್ಭಂತ ಹಣಕಾಸು ಯೋಜನೆಯಡಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಿಸಲಿಟ್ಟ ಅನುದಾನದಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಈ ಯೋಜನೆಯನ್ನು ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲೂ ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಗರ್ಭಿಣಿಯರಿಗೆ ಸೀಮಂತ ಕಾರ್ಯವನ್ನು ತಾಲ್ಲೂಕು ಪಂಚಾಯಿತಿಯಿಂದ ನಡೆಸಿಕೊಡಲಾಯಿತು. ಭಕ್ತರಹಳ್ಳಿ ಪಂಚಾಯಿತಿ ಅಭಿವೃದ್ದಿ ಅಕಾರಿ ಅಂಜನ್ ಕುಮಾರ್, ಆರೋಗ್ಯ ಇಲಾಖೆಯ ಮುನಿರತ್ನಮ್ಮ, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸ್ವ ಸಹಾಯ ಸಂಘಗಳ ಪ್ರತಿನಿಧಿಗಳು ಹಾಜರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version