ಎರಡು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಸಂಜೆ ನಡೆದಿದೆ
ತಾಲ್ಲೂಕಿನ ಕಸಬಾ ಹೋಬಳಿಯ ಅಬ್ಲೂಡು ಗ್ರಾಮದ ಸಮೀಪ ದಿಬ್ಬೂರಹಳ್ಳಿ-ಶಿಡ್ಲಘಟ್ಟ ಮುಖ್ಯರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಾಲ್ಲೂಕಿನ ಜಿ ನಕ್ಕಲಹಳ್ಳಿ ಗ್ರಾಮದ ನಿವಾಸಿ ನರಸಿಂಹಪ್ಪ (22) ಮತ್ತು ಶೆಟ್ಟಿಹಳ್ಳಿ ಗ್ರಾಮದ ಲಕ್ಷ್ಮಿಕಾಂತ್ (28) ಗಾಯಗೊಂಡ ವ್ಯಕ್ತಿಗಳು ಎಂದು ಗುರುತಿಸಲಾಗಿದೆ.
ಗಂಭೀರವಾಗಿ ಗಾಯಗೊಂಡ ಬೈಕ್ ಸವಾರರನ್ನು ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.