22.1 C
Sidlaghatta
Thursday, December 26, 2024

ಗುರುವಾರ ಬೆಂಬಲಿಗರ ಜೊತೆ ನಾಮಪತ್ರ ಸಲ್ಲಿಕೆ – ಸೀಕಲ್ ರಾಮಚಂದ್ರಗೌಡ

Seekal Ramachandra Gowda plans to submit his nomination papers with state leaders and supporters in Sidlaghatta

- Advertisement -
- Advertisement -

Sidlaghatta : ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಏಪ್ರಿಲ್ 20 ರ ಗುರುವಾರ ಮಧ್ಯಾಹ್ನ ನಾಮಪತ್ರ ಸಲ್ಲಿಸುವುದಾಗಿ ಅಭ್ಯರ್ಥಿ ಸೀಕಲ್ ರಾಮಚಂದ್ರಗೌಡ ತಿಳಿಸಿದರು.

ಶಿಡ್ಲಘಟ್ಟ ನಗರದ ಬಿಜೆಪಿ ಸೇವಾಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಕ್ಷೇತ್ರದಲ್ಲಿ ಈಗಾಗಲೇ ಬಿಜೆಪಿ ಪರವಾಗಿ ಅಪಾರ ಜನಬೆಂಬಲ ವ್ಯಕ್ತವಾಗುತ್ತಿದೆ. ಬಿಜೆಪಿ ಜಯಗಳಿಸುವತ್ತ ಮುನ್ನುಗ್ಗುತ್ತಿದೆ. ಗುರುವಾರ ಮಧ್ಯಾಹ್ನ 12 ಗಂಟೆಗೆ ಪಕ್ಷದ ಮುಖಂಡರು, ಕಾರ್ಯಕರ್ತರು, ಪಕ್ಷದ ಬೆಂಬಲಿಗರು ಬಿಜೆಪಿ ಸೇವಾಸೌಧದ ಬಳಿ ಜಮಾವಣೆಯಾಗುತ್ತಾರೆ. ಕಾಲ್ನಡಿಗೆಯಲ್ಲಿ ಸೇವಾಸೌಧದಿಂದ ಅಶೋಕರಸ್ತೆಯಲ್ಲಿ ಬೃಹತ್ ಮೆರವಣಿಗೆಯಲ್ಲಿ ಸಾಗಿ ಕೋಟೆ ವೃತ್ತ, ಟಿ.ಬಿ.ರಸ್ತೆಯ ಮೂಲಕ ತಾಲ್ಲೂಕು ಆಡಳಿತ ಭವನಕ್ಕೆ ಆಗಮಿಸಿ ಮಧ್ಯಾಹ್ನ 1 ರಿಂದ 2 ಗಂಟೆಯೊಳಗೆ ನಾಮಪತ್ರ ಸಲ್ಲಿಸಲಾಗುವುದು ಎಂದರು.

ಕ್ಷೇತ್ರದಲ್ಲಿ ಹಳ್ಳಿ ಹಳ್ಳಿಯಲ್ಲೂ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ನಾಮಪತ್ರ ಸಲ್ಲಿಸಿದ ನಂತರ ಮನೆ-ಮನೆಗೂ ಭೇಟಿ ನೀಡಿ ಮತಯಾಚನೆ ಮಾಡಲಾಗುವುದು ಎಂದರು.

ಸಂಸದರಾದ ಪಿ.ಸಿ.ಮೋಹನ್, ಎಸ್.ಮುನಿಸ್ವಾಮಿ, ಆರೋಗ್ಯ ಸಚಿವ ಡಾ.ಸುಧಾಕರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜ್ ಅವರೂ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಹಾಜರಿರುತ್ತಾರೆ ಎಂದು ಹೇಳಿದರು.

ಆಂಧ್ರಪ್ರದೇಶದ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಲತಿ ರಾಣಿ ಮಾತನಾಡಿ, ಶಿಡ್ಲಘಟ್ಟದಲ್ಲಿ ಇದುವರೆಗೂ ಬಿಜೆಪಿ ಪಕ್ಷ ಈ ಮಟ್ಟಕ್ಕೆ ಬೆಳೆದಿರಲಿಲ್ಲ. ನಾಮಪತ್ರ ಸಲ್ಲಿಸುವಾಗಿನ ಜನಬೆಂಬಲ ಗೆಲುವಿನ ಮುನ್ಸೂಚನೆ ಬರೆಯಲಿದೆ. ಕ್ಷೇತ್ರದಲ್ಲಿ ನಿರುದ್ಯೋಗ, ಶಿಕ್ಷಣ, ಆರೋಗ್ಯ, ವಸತಿ, ನೈರ್ಮಲ್ಯದ ಕೊರತೆ ಎದ್ದು ಕಾಣುತ್ತಿದೆ. ಬಿಜೆಪಿ ಪಕ್ಷದ ಅಭಿವೃದ್ಧಿ ಕಾರ್ಯಕ್ಕೆ ಜನಬೆಂಬಲ ವ್ಯಕ್ತವಾಗಿದೆ ಎಂದರು.

ಮಾಜಿ ಶಾಸಕ ಎಂ.ರಾಜಣ್ಣ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸುರೇಂದ್ರಗೌಡ, ಸೊಣ್ಣೇನಹಳ್ಳಿ ಮೂರ್ತಿ, ನರ್ಮದಾರೆಡ್ಡಿ, ಡಾ.ಡಿ.ಟಿ.ಸತ್ಯನಾರಾಯಣರಾವ್, ರಮೇಶಬಾಯಿರಿ, ಕೆ.ಎಸ್.ಕನಕಪ್ರಸಾದ್ ಹಾಜರಿದ್ದರು.


BJP Candidate Seeks Support Through Large Rally for Nomination Submission

Sidlaghatta : BJP candidate for the Sidlaghatta assembly constituency, Seekal Ramachandra Gowda, announced during a press conference at the Sidlaghatta taluk BJP office ‘Sevasaudha’ that he plans to submit his nomination papers for the upcoming elections through a large rally of supporters and activists. The rally is scheduled to take place on Thursday at 11 am and will include the participation of state leaders such as PC Mohan, MP Muniswamy, MLAs K Sudhakar, and MTB Nagaraj.

Gowda also shared that the level of support for the BJP in Shidlaghatta will become evident on the 20th and that tomorrow is the last day for submitting nomination papers. He stated that he plans to walk to the taluk office with supporters and activists from all 242 booths of the constituency to submit his nomination papers. He expressed his dedication to the area by saying, “Sidlaghatta is my karmabhoomi. Win or lose, this is my karmabhoomi.”

In addition to this, Kichcha Sudeep and Telugu superstar Pawan Kalyan are expected to participate in promotional activities in the coming days, though the dates for these events have yet to be announced.

During the press conference, former legislator M. Rajanna, Dr. Satyanarayana, Sonnenahalli Murthy, Malathi Rani, Narmada Reddy of Mahila Morcha, District Secretary Nandish, Taluk Mandal President Surendra Gowda, and Kanaka Prasad were also in attendance.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!