ನಗರದ ನಗರೇಶ್ವರ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಬಿಜೆಪಿ ಹಾಗೂ ರಾಷ್ಟ್ರೋತ್ಥಾನ ರಕ್ತ ನಿಧಿ ಸಹಯೋಗದೊಂದಿಗೆ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ಸಂಸದ ಎಸ್.ಮುನಿಸ್ವಾಮಿ ಮಾತನಾಡಿದರು.
ಕೊರೊನಾ ಸಂದರ್ಭದಲ್ಲಿ ದೇಶದಲ್ಲಿ ಜನಸಾಮಾನ್ಯರ ಕೈಹಿಡಿದದ್ದು, ರಕ್ತ ಸಂಗ್ರಹ ಮಾಡಿ ಸಂಕಷ್ಟದಲ್ಲಿರುವವರಿಗೆ ಸಹಾಯ ಹಸ್ತ ನೀಡುವ ಪಕ್ಷ ಯಾವುದಾದರೂ ಇದ್ದರೆ ಅದು ಬಿಜೆಪಿ ಪಕ್ಷ ಎಂದು ಅವರು ತಿಳಿಸಿದರು.
ಕರೊನಾ ಸಂಕಷ್ಟದಿಂದ ರಕ್ತದಾನ ಮಾಡಲು ದಾನಿಗಳು ಮುಂದೆ ಬರುತ್ತಿಲ್ಲ. ಅದಕ್ಕಾಗಿ ನಮ್ಮ ಬಿಜೆಪಿ ಪಕ್ಷದಿಂದ ನಗರ ಸೇರಿದಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹೆಚ್ಚು ಹೆಚ್ಚು ಶಿಬಿರಗಳ ಏರ್ಪಡಿಸಿ ರಕ್ತವನ್ನು ಸಂಗ್ರಹಿಸಿ ಕಷ್ಟದಲ್ಲಿರುವವರಿಗೆ ಸ್ಪಂದಿಸಬೇಕೆಂದರು.
ಒಗ್ಗಟ್ಟಿನಿಂದ ಬಿಜೆಪಿ ಕಾರ್ಯಕರ್ತರು ಸಾರ್ವಜನಿಕರಿಗೆ ಉಪಯುಕ್ತ ಕೆಲಸಗಳನ್ನು ಮಾಡಬೇಕು. ಆಗ ಬಿಜೆಪಿ ಪಕ್ಷ ಪಟ್ಟಣ, ನಗರ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಧಿಕಾರ ಹಿಡಿಯಲಿದೆ. ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗಳು ಬರಲಿದೆ. ನಮ್ಮ ಪಕ್ಷದ ಮುಖಂಡರು ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ ಅಧಿಕಾರಕ್ಕೆ ತರಬೇಕೆಂದರು.
ಮಾಜಿ ಶಾಸಕ ಎಂ.ರಾಜಣ್ಣ, ಬಿಜೆಪಿ ನಗರಮಂಡಲ ಅಧ್ಯಕ್ಷ ರಾಘವೇಂದ್ರ, ಗ್ರಾಮಾಂತರ ಅಧ್ಯಕ್ಷ ಸುರೇಂದ್ರಗೌಡ, ಜಿಲ್ಲಾ ಕಾರ್ಯದರ್ಶಿ ಬಿ.ಸಿ.ನಂದೀಶ್, ನಗರಸಭೆ ಸದಸ್ಯ ನಾರಾಯಣಸ್ವಾಮಿ, ನಾರ್ತ್ ಈಸ್ಟ್ ಸುರೇಶ್, ಮುಕೇಶ್, ಶ್ರೀಧರ್, ಶ್ರೀರಾಮರೆಡ್ಡಿ, ಮಂಜುಳಮ್ಮ, ಸುಜಾತಮ್ಮ, ರತ್ನಮ್ಮ ಹಾಜರಿದ್ದರು.
SUBSCRIBE, LIKE & SHARE ನಮ್ಮ ಶಿಡ್ಲಘಟ್ಟ
Facebook 👍🏻
http://www.facebook.com/sidlaghatta
Instagram 📷
http://www.instagram.com/sidlaghatta
Youtube ▶️
https://www.youtube.com/c/sidlaghatta
Website 🌐
http://www.sidlaghatta.com
📱 Join WhatsApp
https://wa.me/917406303366?text=Hi