Home News ಕ್ಷೇತ್ರದ ಅಭಿವೃದ್ಧಿಯೇ ನಮ್ಮ ಗುರಿ – ಬಿ.ಎನ್.ರವಿಕುಮಾರ್

ಕ್ಷೇತ್ರದ ಅಭಿವೃದ್ಧಿಯೇ ನಮ್ಮ ಗುರಿ – ಬಿ.ಎನ್.ರವಿಕುಮಾರ್

0
JDS Melur B N Ravikumar Press Meeting Grama Panchayat Election Sidlaghatta

ಶಿಡ್ಲಘಟ್ಟ ತಾಲ್ಲೂಕಿನ ಮೇಲೂರಿನಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಮುಖಂಡ ಮೇಲೂರು ಬಿ.ಎನ್.ರವಿಕುಮಾರ್ ಮಾತನಾಡಿದರು.

ಕಳೆದ ಹಲವಾರು ವರ್ಷಗಳ ಗ್ರಾಮ ಪಂಚಾಯಿತಿ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚು ಮಂದಿ ಜೆಡಿಎಸ್ ಬೆಂಬಲಿತರನ್ನು ಶಿಡ್ಲಘಟ್ಟ ಕ್ಷೇತ್ರದ ಜನತೆ ಬೆಂಬಲಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿಯೇ ನಮ್ಮ ಗುರಿ ಎಂದು ಅವರು ತಿಳಿಸಿದರು.

 ಶಿಡ್ಲಘಟ್ಟ ಕ್ಷೇತ್ರದ ಒಟ್ಟು 30 ಗ್ರಾಮ ಪಂಚಾಯಿತಿಗಳಲ್ಲಿ 460 ಮಂದಿ ಜೆಡಿಎಸ್ ಬೆಂಬಲಿತರು ಸ್ಪರ್ಧಿಸಿದ್ದರು. ಅವರಲ್ಲಿ 268 ಮಂದಿ ಜನರ ಆಶೀರ್ವಾದದೊಂದಿಗೆ ಜಯಶೀಲರಾಗಿದ್ದಾರೆ. 15 ಗ್ರಾಮ ಪಂಚಾಯಿತಿಗಳಲ್ಲಿ ನಮಗೆ ಬಹುಮತ ಸಿಕ್ಕಿದೆ. 4 ರಲ್ಲಿ ಸಮಬಲರಾಗಿದ್ದೇವೆ. ಮಾಜಿ ಸಚಿವ ಹಾಗೂ ಹಾಲಿ ಶಾಸಕರ ಸ್ವಗ್ರಾಮ ಹಂಡಿಗನಾಳ ಗ್ರಾಮ ಪಂಚಾಯಿತಿ ಜೆಡಿಎಸ್ ಪಾಲಾಗಿರುವುದು ಸಂತಸ ತಂದಿದೆ ಎಂದರು.

 ಬ್ರಷ್ಟಾಚಾರ ಮತ್ತು ಕಾಂಗ್ರೆಸ್ ದುರಾಡಳಿತವನ್ನು ವಿರೋಧಿಸಿ 2003 ರಲ್ಲಿ ರಾಜಕಾರಣವನ್ನು ಪ್ರವೇಶಿಸಿದೆ. ಅಧಿಕಾರ ಅಥವಾ ಹಣ ಬಯಸಿ ರಾಜಕಾರಣಕ್ಕೆ ಬರಲಿಲ್ಲ. ಜನರ ನೋವನ್ನು ನಿವಾರಿಸುವುದು, ಕ್ಷೇತ್ರದ ಅಭಿವೃದ್ಧಿ ಮಾಡುವುದು ನನ್ನ ಧ್ಯೇಯ. ಗ್ರಾಮ ಪಂಚಾಯಿತಿಯಲ್ಲಿ ಗೆದ್ದವರು ಜನ ಸೇವೆ ಮಾಡಿ, ಮುಂಬರುವ ಚುನಾವಣೆಗಳಲ್ಲಿ ಜೆಡಿಎಸ್ ಪಕ್ಷವನ್ನು ಗೆಲ್ಲಲು ಸಹಕರಿಸಬೇಕೆಂದು ಹೇಳಿದರು.

 ಮುಖಂಡ ತಾದೂರು ರಘು ಮಾತನಾಡಿ, ಈ ಬಾರಿಯ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದವರು ಒಳಒಪ್ಪಂದ ಮಾಡಿಕೊಂಡು ಕೆಟ್ಟ ರಾಜಕಾರಣವನ್ನು ಮಾಡಿದ್ದರೆ. ಇವರ ವಿರುದ್ಧ ಸೈದ್ಧಾಂತಿಕವಾಗಿ ಜೆಡಿಎಸ್ ಬೆಂಬಲಿಗರು ಸ್ಪರ್ಧಿಸಿ ಜನಬೆಂಬಲದಿಂದ ಜಯವನ್ನು ಪಡೆದಿರುವರು ಎಂದರು.

 ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಬಂಕ್ ಮುನಿಯಪ್ಪ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತರೂ ಮುಖಂಡ ಬಿ.ಎನ್.ರವಿಕುಮಾರ್ ಜನರಲ್ಲಿ ಬೆರೆತು, ವಿಶ್ವಾಸ ಗಳಿಸಿರುವುದಕ್ಕೆ ಈ ಚುನಾವಣೆ ಫಲಿತಾಂಶವೇ ನಿದರ್ಶನ. ಮುಂದಿನ ದಿನಗಳಲ್ಲಿ ಶಿಡ್ಲಘಟ್ಟ ಕ್ಷೇತ್ರದ ಜನತೆ ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ಬೆಂಬಲಿಸುವರು ಎಂದರು.

 ಮುಖಂಡ ನಂದನವನಂ ಶ್ರೀರಾಮರೆಡ್ಡಿ ಮಾತನಾಡಿ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದವರು ವಿನಯವಂತರಾಗಿ ಜನಸೇವೆ ಮಾಡಿ. ಆಗ ಮುಂಬರುವ ಚುನಾವಣೆಗಳಲ್ಲಿ ಜೆಡಿಎಸ್ ಪಕ್ಷವನ್ನು ಜನರೇ ಬೆಂಬಲಿಸುತ್ತಾರೆ. ಚಿಲಕಲನೇರ್ಪು ಹೋಬಳಿಯಲ್ಲಿನ 6 ಗ್ರಾಮ ಪಂಚಾಯಿತಿಗಳಲ್ಲಿ 5 ಜೆಡಿಎಸ್ ಪಾಲಾಗಿದೆ. ಜನರ ಋಣ ತೀರಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಎಂದರು.

 ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ನಾರಾಯಣಸ್ವಾಮಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಕೆ.ರಾಜಶೇಖರ್, ಡಾ.ಧನಂಜಯರೆಡ್ಡಿ, ಹುಜಗೂರು ರಾಮಣ್ಣ, ಗೋಪಾಲ್, ಮೇಲೂರು ಆರ್.ಎ.ಉಮೇಶ್, ಕೆ.ಎಸ್.ಮಂಜುನಾಥ್, ಮುಗಿಲಡಿಪಿ ನಂಜಪ್ಪ, ಶಶಿಕುಮಾರ್ ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version