ಶಿಡ್ಲಘಟ್ಟ ನಗರದ ಪ್ರವಾಸಿಮಂದಿರದಲ್ಲಿ ಗುರುವಾರ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಗಂಗಾಕಲ್ಯಾಣ ಯೋಜನೆಯಡಿ ೩೮ ಫಲಾನುಭವಿಗಳಿಗೆ ಪಂಪು, ಮೋಟಾರು, ಕೇಬಲ್ ಗಳನ್ನು ವಿತರಿಸಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.
ಬಯಲುಸೀಮೆ ಭಾಗದಲ್ಲಿ ಅಂತರ್ಜಲ ಮಟ್ಟ ತೀವ್ರವಾಗಿ ಕುಸಿದಿದ್ದು ರೈತರ ಆರ್ಥಿಕ ಪರಿಸ್ಥಿತಿ ಸುಧಾರಣೆ ಮಾಡಬೇಕು ಎನ್ನುವ ಉದ್ದೇಶದಿಂದ ಗಂಗಾಕಲ್ಯಾಣ ಯೋಜನೆಯಡಿ ಕೊರೆದಿರುವ ಕೊಳವೆಬಾವಿಗಳ ಸೌಲಭ್ಯ ಸದುಪಯೋಗ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.
ಈ ಭಾಗದಲ್ಲಿನ ಕೆರೆಗಳಿಗೆ ನೀರು ತುಂಬಿಸಿ ಅಂತರ್ಜಲದ ಮಟ್ಟವನ್ನು ಏರಿಕೆ ಮಾಡಲು ಈಗಾಗಲೇ ಎಚ್.ಎನ್.ವ್ಯಾಲಿ ಯೋಜನೆಯಡಿ ಸರ್ಕಾರ ಕ್ರಮ ಕೈಗೊಂಡಿದೆ. ರೈತರು ಈಗ ಲಭ್ಯವಾಗಿರುವ ನೀರನ್ನು ಸದ್ಭಳಕೆ ಮಾಡಿಕೊಂಡು ಬೆಳೆಗಳನ್ನು ಇಡಬೇಕು. ಯಾವ ಫಲಾನುಭವಿಗಳು ಸೌಲಭ್ಯಗಳನ್ನು ಪಡೆದುಕೊಳ್ಳುತ್ತಾರೋ ಅಂತಹವರೇ ಇದನ್ನು ಬಳಕೆ ಮಾಡಿಕೊಳ್ಳಬೇಕು. ಸರ್ಕಾರದ ಸೌಲಭ್ಯಗಳು ದುರುಪಯೋಗವಾಗಬಾರದು ಎಂದರು.
ಈಗಾಗಲೆ ನಿಗಮದ ವತಿಯಿಂದ ವಿದ್ಯುತ್ ಪೂರೈಕೆ ಮಾಡಲು ಹಣ ಪಾವತಿಸಲಾಗಿದ್ದು ಬೆಸ್ಕಾಂ ಇಲಾಖೆ ಸಿಬ್ಬಂದಿ ವಿಳಂಬ ಮಾಡಿದಲ್ಲಿ ನಮ್ಮ ಗಮನಕ್ಕೆ ತನ್ನಿ ಎಂದರು.
ತಾಲ್ಲೂಕು ಪಂಚಾಯಿತಿ ಇಓ ಬಿ.ಕೆ.ಚಂದ್ರಕಾಂತ್, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕ್ಷೇತ್ರಾಭಿವೃದ್ದಿ ಅಧಿಕಾರಿ ಎಂ.ರಾಜಶೇಖರ, ಜಿಲ್ಲಾ ವ್ಯವಸ್ಥಾಪಕ ಬಾಲಾಜಿ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎ.ನಾಗರಾಜ್, ನಗರಸಭೆ ಸದಸ್ಯ ಅನಿಲ್‌ಕುಮಾರ್ ಹಾಜರಿದ್ದರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi