Sidlaghatta : ಡಾ. ಬಿ. ಆರ್. ಅಂಬೇಡ್ಕರ್ ಅವರು ಭಾರತ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರು. ನಮ್ಮ ದೇಶದ ಪ್ರತಿಯೊಬ್ಬರ ಪಾಲಿನ ಪವಿತ್ರ ಗ್ರಂಥವಾದ ಸಂವಿಧಾನದ ಹಿಂದಿನ ದೊಡ್ಡ ಶಕ್ತಿ ಬಾಬಾ ಸಾಹೇಬ್ ಅಂಬೇಡ್ಕರ್. ಸಮಾನತೆ, ಪ್ರಗತಿಯ ಕನಸು ಕಂಡ ಮೇರು ನಾಯಕ ನಮ್ಮ ಹೆಮ್ಮೆಯ ಸಂವಿಧಾನ ಶಿಲ್ಪಿ. ಅಂಬೇಡ್ಕರ್ ಅವರ ಬದುಕು ಎಲ್ಲರಿಗೂ ಸ್ಫೂರ್ತಿ. ಇವರ ಆದರ್ಶ ಎಲ್ಲರ ಜೀವನಕ್ಕೆ ದಾರಿ ಎಂದು ನಗರಸಭೆ ಪೌರಾಯುಕ್ತ ಶ್ರೀಕಾಂತ್ ತಿಳಿಸಿದರು.
ಶಿಡ್ಲಘಟ್ಟ ನಗರಸಭೆಯಲ್ಲಿ ಶುಕ್ರವಾರ ನಗರಸಭೆ, ತಾಲ್ಲೂಕು ಪಂಚಾಯಿತಿ, ಆರೋಗ್ಯ ಇಲಾಖೆ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಎಲ್ಲರನ್ನು ಸಮಾನವಾಗಿ ಕಾಣುವ ಸಮಾಜದ ನಿರ್ಮಾಣಕ್ಕಾಗಿ ಅವಿರತವಾಗಿ ಶ್ರಮಿಸಿದವರು ಅಂಬೇಡ್ಕರ್. ಶೋಷಿತರು, ಕಾರ್ಮಿಕರು, ಮಹಿಳೆಯರ ಉನ್ನತಿಗೆ ಹೋರಾಡಿದ, ಅಸಹಾಯಕರ ಧ್ವನಿಯಾದ, ಸಮಾನತೆಯ ಕನಸು ಕಂಡ, ಎಲ್ಲರ ಬದುಕಿಗೆ ಸ್ಫೂರ್ತಿಯಾದ ಈ ಮಹಾನ್ ನಾಯಕರ ಕೊಡುಗೆಯನ್ನು ಸದಾ ಸ್ಮರಿಸೋಣ ಎಂದರು.
ತಾಲ್ಲೂಕು ಪಂಚಾಯಿತಿ ಇಒ ಮುನಿರಾಜ ಮಾತನಾಡಿ, ಭೀಮರಾವ್ ರಾಮ್ ಜಿ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತೆ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರು. ಅಂದಿನ ಪ್ರಧಾನಿ ನೆಹರು ವಿದೇಶಿ ಗಣ್ಯರಿಗೆ ಪರಿಚಯಿಸುವಾಗ “ಡಾ.ಅಂಬೇಡ್ಕರ್ ನನ್ನ ಮಂತ್ರಿ ಮಂಡಲದ ವಜ್ರ” ಎನ್ನುತ್ತಿದ್ದರು ಎಂದು ಹೇಳಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಸಿಡಿಪಿಒ ನವತಾಜ್, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ಬಾರೆಡ್ಡಿ ಹಾಜರಿದ್ದರು.
Celebrating the Life and Legacy of Dr. B. R. Ambedkar: India’s Constitution Architect
Sidlaghatta : The municipal commissioner Srikanth recently spoke at a program celebrating the birth anniversary of Dr. B. R. Ambedkar, one of India’s greatest leaders and the architect of the country’s constitution. Srikanth emphasized Ambedkar’s tireless efforts towards building a society where everyone is treated equally and praised him as an inspiration to all. The event was attended by representatives from the Municipal Council, Taluk Panchayat, Health Department, and Taluk SVEEP Committee.
Taluk Panchayat EO Muniraja also spoke at the event, highlighting Ambedkar’s contributions towards fighting for social equality and the elimination of untouchability. Prime Minister Nehru once referred to Ambedkar as “the diamond of my ministerial council” when introducing him to foreign dignitaries.
The event was attended by other notable figures such as Taluk Health Officer Dr. Venkateshamurthy, CDPO Navtaj, and Taluk Government Employees Association President Subbareddy. Overall, the event served as a reminder of the impact that Ambedkar had on India and how his legacy continues to inspire people today.